ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ನೇರ ಪ್ರಸಾರ ಯುಟ್ಯೂಬ್‍ನಲ್ಲಿ ಲಭ್ಯ

ಕಲಬುರಗಿ,ಸೆ.16:ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2020ರ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೆ. 17 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದು, ಈ ಕಾರ್ಯಕ್ರಮವನ್ನು ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಕುಳಿತುಕೊಂಡು ಮೊಬೈಲ್‍ನಲ್ಲಿ ಯೂಟ್ಯೂಬ್ ಲಿಂಕ್ https://youtu.be/0hLxo7bbZQs ಮೂಲಕ ಬೆಳಗಿನ 7 ಗಂಟೆಯಿಂದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಇದಲ್ಲದೇ ಕಲ್ಯಾಣ ಕರ್ನಾಟಕ ಪ್ರದೇಶದ ಆರು ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಲ್ಲಿ ಸಹ ಈ ಕಾರ್ಯಕ್ರಮದ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿದೆ.