ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮಾಚರಣೆ

(ಸಂಜೆವಾಣಿ ವಾರ್ತೆ)
ಹುಮನಾಬಾದ್ :ಸೆ.17:ಪಟ್ಟಣದ ತಾಲೂಕ ಆಡಳಿತ ಕಚೇರಿಯಲ್ಲಿ ಶನಿವಾರ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಬಳಿಕ ಶಾಸಕ ರಾಜಶೇಖರ ಪಾಟೀಲ್ ಮಾತನಾಡಿ, ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದೆವೆ. ಕಲ್ಯಾಣ ಕರ್ನಾಟಕ ಭಾಗದ ರೈತರ ಹಾಗೂ ಜನಸಾಮಾನ್ಯರ ಸವಾರ್ಂಗೀಣ ಅಭಿವೃದ್ಧಿಗೆ ಪೂರಕವಾಗಿ ಶ್ರಮ ವಹಿಸುವ ಪ್ರಾಣಿಕ ಪ್ರಯತ್ನ ಮಾಡೋಣ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ್, ಪುರಸಭೆ ಅಧ್ಯಕ್ಷೆ ನೀತು ಶರ್ಮಾ, ತಹಸೀಲ್ದಾರ್ ಡಾ. ಪ್ರದೀಪಕುಮಾರ ಹಿರೇಮಠ, ಕ್ಷೇತ್ರ ಶಿಕ್ಷಾಣಾಧಿಕಾರಿ ವೆಂಕಟೇಶ ಗೂಡಾಳ, ಡಾ. ಗೋವಿಂದ, ಗ್ರೇಡ್ 2 ತಹಸೀಲ್ದಾರ್ ಮಂಜುನಾಥ ಪಂಚಾಳ ಸೇರಿದಂತೆ ಅನೇಕರಿದ್ದರು.