ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಆಚರಣೆ ಪೂರ್ವ ಭಾವಿ ಸಿದ್ಧತಾ ಸಭೆ

ಸಂಜೆವಾಣಿ ವಾರ್ತೆ
ಹೊಸಪೇಟೆ ಸೆ.11 ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಹಾಗೂ ವಿಶ್ವಕರ್ಮ ಜಯಂತಿ ಆಚರಣೆ ಪೂರ್ವಭಾವಿ ಸಿದ್ಧತಾ ಸಭೆಯು ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಇತ್ತೀಜೆಗೆ ಜರುಗಿತು.
ಸಹಾಯಕ ಆಯುಕ್ತ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು ‌ಭಾಗವಹಿಸಿದ್ದರು. ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ಮಾತನಾಡಿ ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು ರಾಜ್ಯ ಸರ್ಕಾರವು ನಿಯಮಗಳನ್ನು ಒಳಗೊಂಡ ಸುತ್ತೊಲೆ ನೀಡಿದ್ದು ಅದರನ್ವಯ ಸುರಕ್ಷತಾ ಕ್ರಮಗಳೊಂದಿಗೆ ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸುವುದರ ಜೊತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರಳವಾಗಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಹಾಗೂ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಮತ್ತು ಬ್ಯಾಂಕುಗಳಲ್ಲಿ ಸಾಂಕೇತಿಕವಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಬೇಕು ಎಂದರು.
ಉತ್ಸವ ಆಚರಣೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಗಳನ್ನಿಡಬೇಕೆಂದು ಹೇಳಿದರು. ಅಂದೆ ಬೆಳಿಗ್ಗೆ 09 ಗಂಟೆಗೆ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಬೆಳಿಗ್ಗೆ 08 ಗಂಟೆಗೆ ಧ್ವಜಾರೋಹಣವನ್ನು ನೇರವೇರಿಸಬೇಕು ಎಂದರು, ಧ್ವಜಾರೋಹಣದ ನಂತರ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ಹೇಳಿದರು. 
ಈ ಸಂದರ್ಭದಲ್ಲಿ ತಹಶೀಲ್ದಾರರಾದ ಹೆಚ್.ವಿಶ್ವನಾಥ್, ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ, ಕ್ಷೇತ್ರ ಶಿಕ್ಷಣಾಧಿಕಾರಿಯಾದ ಸುನಂದಾ ಹಾಗೂ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.