ಕಲ್ಯಾಣ ಕರ್ನಾಟಕ ಭಾಗದ ಕಲಾವಿದರಿಗೆ ಗುರುತಿನ ಚೀಟಿ ನೀಡಲು ಮನವಿ

ಬೀದರ:ಮೇ.20:ಕಲ್ಯಾಣ ಕರ್ನಾಟಕದ ಕಲಾವಿದ ಒಕ್ಕೂಟದ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಕನ್ನಡ ಮತ್ತು ಸಂಸ್ಕøತ ಇಲಾಖೆ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಕಲಾವಿದರಿಗೆ ಗುರುತಿನ ಚೀಟಿ ನೀಡುತ್ತಿದ್ದು ಈಗಾಗಲೇ ಕೆಲವು ಜಿಲ್ಲೆಯ ಕಲಾವಿದರಿಗೆ ನೀಡಲಾಗಿದೆ. ಆದರೆ ಕಲ್ಯಾಣ ಕರ್ನಾಟಕ ಭಾಗದ ಕಲಾವಿದರಿಗೆ ಇದುವರೆಗೂ ನೀಡಿರುವುದಿಲ್ಲ. ಕಲ್ಯಾಣ ಕರ್ನಾಟಕದ ಕಲಾವಿದರ ಒಕ್ಕೂಟದ ಮೂಲಕ ಈಗಾಗಲೇ ನಾವು ಮೊದಲು ಮನವಿ ಸಲ್ಲಿಸುತ್ತಾ ಬಂದಿದ್ದೇವೆ.

ಕಾರಣ ಕಲ್ಯಾಣ ಕರ್ನಾಟಕ ಭಾಗದ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಗುರುತಿನ ಚೀಟಿ ನೀಡುವಂತೆ ಒತ್ತಾಯಿಸಿ ಇಂದು ಬೆಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ನೂತನ ವಾಗಿ ನೇಮಕಗೊಂಡ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ಕಲಾವಿದ ಒಕ್ಕೂಟದ ಅಧ್ಯಕ್ಷರಾದ ವಿಜಯಕುಮಾರ ಸೋನಾರೆ, ಪ್ರಧಾನ ಕಾರ್ಯದರ್ಶಿಯಾದ ಪ್ರಕಾಶ ಅಂಗಡಿ ಹಾಗೂ ಸದಸ್ಯರಾದ ಶಿವಕುಮಾರ ಎಚ್ ಎಮ್, ಪಣೇಂದ್ರ ಪ್ರಸಾದ ಡಿ ಇದ್ದರು.