
ಬೀದರ, ಜು 09: ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಶಾಸ್ತ್ರ ಹಾಗೂ ಪರಿಸರ ಸಚಿವ ಮತ್ತು ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು.
ಅವರು ಶನಿವಾರ ಬೀದರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪದ್ರೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೆಕೆಆರ್‍ಡಿಬಿ ವತಿಯಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಮುಖ್ಯವಾಗಿ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಕಾಮಗಾರಿಗಳ ಕ್ರೀಯೆ ಯೋಜನೆ ತಯ್ಯಾರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡದರು.
ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳು ಹಾಗೂ ಪೂರ್ಣಗೊಂಡ ಕಾಮಗಾರಿಗಳ ಗುತ್ತಿಗೆದಾರರಿಗೆ ಹಣ ಪಾವತಿಸಲು ವಿಳಂಬವಾಗುತ್ತಿದ್ದು ಕೂಡಲೆ ಪಾವತಿಯಾಗುವಂತೆ ಕ್ರಮವಹಿಸಬೇಕು.
ಈಗಾಗಲೇ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ಜುಲೈ 01 ರಿಂದ ಬೀದರನಿಂದಲೇ ಆರಂಭಗೊಂಡಿದ್ದು ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 68 ಲಕ್ಷ ಸಸಿಗಳನ್ನು ನೆಡಲಾಗಿದೆ. ಬೀದರ ಜಿಲ್ಲೆಯಲ್ಲಿ 4.22 ಲಕ್ಷ ಸಸಿಗಳನ್ನು ನೆಡಲಾಗಿದೆ ಇವುಗಳ ರಕ್ಷಣೆಯ ಉದ್ದೇಶದಿಂದ ಇವುಗಳ ಆಡಿಟ್ ಹಾಗೂ ಜಿಯೋ ಟ್ಯಾಗ್ ಮಾಡಲಾಗುವುದು ಎಂದರು.
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ, ಗ್ರಾಮೀಣ ರಸ್ತೆಗಳ ಬದಿಯಲ್ಲಿ ಸಸಿಗಳನ್ನು ನೆಡಲು ಕ್ರಮವಹಿಸಲು ಜಿಲ್ಲಾ ಪ್ರದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ ಅವರಿಗೆ ತಿಳಿಸಿದರು. ಮುಂದಿನ ದಿನಗಳಲ್ಲಿ ಸಸಿಗಳ ಕೊರತೆ ಉಂಟಾದಲ್ಲಿ ಬೆರೆ ಜಿಲ್ಲೆಗಳಿಂದ ತರೆಸಿಕೊಳ್ಳಲು ಪ್ರಸ್ತಾವನೆ ಸಲ್ಲಿಸಬೇಕು. ಈ ವರ್ಷ ಬೀದರ ಜಿಲ್ಲೆಯೊಂದರಲ್ಲೇ ಕನಿಷ್ಠ 15 ರಿಂದ 20 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸಬೇಕು. ಸಸಿ ನೆಡುವ ಕಾರ್ಯಕ್ರಮವು ಅಗಸ್ಟ 15 ರ ಒಳಗೆ ಸಂಪೂರ್ಣವಾಗಿ ಪೂರ್ಣಗೊಳ್ಳಬೇಕು ಎಂದು ಹೇಳಿದರು.
ಮುಖ್ಯ ಮಂತ್ರಿಗಳು ಮಂಡಿಸಿದ ಬಜೆಟ್‍ನಲ್ಲಿ ಕೂಡ ಹಸಿರು ವಲಯ ವ್ಯಾಪ್ತಿಯ ಹೆಚ್ಚಳಕ್ಕೆ ಒತ್ತು ನೀಡಲಾಗಿದೆ, ಬೀದರ ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿ 2 ಲಕ್ಷ 90 ಸಾವಿರ ಮನೆಯೋಡತಿ ಫಲಾನುಭವಿಗಳಿದ್ದು. ಅವರಲ್ಲಿ ಅರ್ಹರಾದ 2 ಲಕ್ಷ 75 ಸಾವಿರ ಮನೆಯ ಯಜಮಾನಿಯರು ಇದರ ಲಾಭ ಪಡೆಯಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು ಬಿತ್ತನೆ ಕಾರ್ಯ ಚುರುಕುಗೊಂಡಿದ್ದು ರೈತರಿಗೆ ಯಾವುದೇ ರೀತಿಯಲ್ಲಿ ಬಿಜ ಹಾಗೂ ರಸಗೋಬ್ಬರಗಳ ಕೊರತೆಯಾಗಬಾರದು. ಬೆಳೆ ಹಾನಿಯಾದ ರೈತರಿಗೆ ಇರುವ ಫಸಲ್ ಭಿಮಾ ಯೋಜನೆ
ಅಡಿಯಲ್ಲಿ ಬಾಕಿ ಉಳಿದ ಬೆಳೆ ವಿಮಾ ಹಣವನ್ನು ಕೊಡಲೆ ಪಾವತಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯ ಅರವಿಂದಕುಮಾರ ಅರಳಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ, ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್., ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.