ಕಲ್ಯಾಣ ಕರ್ನಾಟಕ ಭಾಗದ ಶಾಸಕರಿಗೆ ಸಚಿವ ಸ್ಥಾನ ನೀಡಲು ಬಾಬುರಾವ್ ಆಗ್ರಹ

ರಾಯಚೂರು, ಜುಲೈ,೨೩,ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಬಿಜೆಪಿ ಶಾಸಕರು ಗೆಲವು ಸಾಧಿಸಿದ್ದಾರೆ. ಸರ್ಕಾರ ರಚನೆಯಲ್ಲಿ ಕಲ್ಯಾಣ ಕರ್ನಾಟಕದ ಪಾತ್ರ ದೊಡ್ಡದು. ಹೈಕಮಾಂಡ್ ಇದನ್ನು ಪರಿಗಣಿಗೆ ತೆಗೆದುಕೊಂಡು ಸಚಿವ ಸಂಪುಟದಲ್ಲಿ ಈ ಭಾಗದ ಶಾಸಕರಿಗೆ ಸ್ಥಾನಮಾನ ನೀಡಬೇಕೆಂದು ಎಪಿಎಂಸಿ ಮಾಜಿ ಉಪಾಧ್ಯಕ್ಷ ಬಾಬುರಾವ್ ಒತ್ತಾಯಸಿದರು.
ಪಕ್ಷದ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ರವಾನೆ ಮಾಡಿದ್ದಾರೆ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಒಟ್ಟು ೪೧ ಶಾಸಕರ ಕ್ಷೇತ್ರಗಳ ಪೈಕಿ ೧೯ ಸ್ಥಾನಗಳಲ್ಲಿ ಬಿಜೆಪಿ ಗೆಲವು ಸಾಧಿಸಿದೆ. ಈ ಭಾಗದ ಶಾಸಕರಿಗೆ ಮಂತ್ರಿ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯಿಂದ ಅಭಿವೃದ್ಧಿ ಕಾರ್ಯಗಳು ವೇಗವಾಗಿ ಸಾಗುತ್ತದೆ ಎಂದು ಬಿಜೆಪಿ ಪಕ್ಷದ ಮೇಲೆ ಜನರು ವಿಶ್ವಾಸ ಇಟ್ಟುಕೊಂಡು ಪಕ್ಷದ ಅಭ್ಯರ್ಥಿಗಳಿಗೆ ಮತವನ್ನು ಚಲಾಯಿಸಿದರು. ಅದರಿಂದ ಅರ್ಧಸ್ಥಾನಗಳು ಬಿಜೆಪಿ ಬಾಚಿಕೊಂಡದೆ. ಆದರೆ ಈ ಭಾಗದ ಶಾಸಕರಿಗೆ ಸಚಿವ ಸ್ಥಾನ ನೀಡದೆ ಜನರ ಭಾವನೆಗೆ ಮನ್ನಣೆ ಸಿಕ್ಕಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ನೀತಿ ಆಯೋಗ ಅನುಸಾರ ಮಹಾತ್ವಾಕಾಂಕ್ಷಿಯಿಂದ ಅಭಿವೃದ್ದಿ ಪಡಿಸಬೇಕಾಗಿರುವ ಹಿನ್ನೆಲೆಯಲ್ಲಿ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ಮಂತ್ರಿ ಮಂಡಲದಲ್ಲಿ ಮೊದಲ ಆದ್ಯತೆ ಮತ್ತು ಪ್ರಭಲ ಖಾತೆ ನೀಡಬೇಕೆಂದು ಬಾಬುರಾವ್ ಆಗ್ರಹಿಸಿದರು.