ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 20 ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆ


ಸಂಜೆ ವಾಣಿ ವಾರ್ತೆ
ಕೊಟ್ಟೂರು: ಮಾ,15- ನಾವು ಈಗಾಗಲೇ 50 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ವಿಧಾನಸಭಾ ಚುನಾವಣೆಯ ಸ್ಪರ್ಧೆಗೆ ನಿಲ್ಲಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಮುಂಬರುವ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಇಪ್ಪತ್ತು ಕ್ಷೇತ್ರಕ್ಕೂ ಹೆಚ್ಚು  ಗೆಲ್ಲುವ ನಿರೀಕ್ಷೆ ಇದೆ ಎಂದು ವಿಜಯನಗರ ಜಿಲ್ಲೆಯ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾದ ರೇವಣ್ಣ ಸಿದ್ದಪ್ಪ ತಿಳಿಸಿದರು.
   ವಿಜಯನಗರ ಜಿಲ್ಲೆಯ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಬಾರಿಗೆ ಕೊಟ್ಟೂರು ಭಾಗದ ಪ್ರವಾಸಿ ಮಂದಿರದಲ್ಲಿ ಸಂಘಟನೆಕಾರರನ್ನು ಉದ್ದೇಶಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
     ಮುಂದಿನ ದಿನಗಳಲ್ಲಿ ತಾಲೂಕು ಅಧ್ಯಕ್ಷರು ಮತ್ತು ಕಾರ್ಯದರ್ಶಿ, ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ, ಕೆಲವೇ ದಿನಗಳಲ್ಲಿ ಕೊಟ್ಟೂರು ಮತ್ತು ಗಾಣಗಟ್ಟೆ ಗ್ರಾಮಗಳಿಗೆ ಜನಾರ್ದನ ರೆಡ್ಡಿ ಅವರ ಪತ್ನಿಯಾದ  ಅರುಣ್  ಲಕ್ಷ್ಮಿ  ನೇತೃತ್ವದಲ್ಲಿ ಬೃಹತ್ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗುತ್ತದೆ. ಈಗಾಗಲೇ ನಮ್ಮ ಸಂಪರ್ಕಕ್ಕೆ ಕೊಟ್ಟೂರು ಭಾಗದ ಮೂವರು ವ್ಯಕ್ತಿಗಳು ಟಿಕೆಟ್ ಗೆ ಸಂಪರ್ಕದಲ್ಲಿದ್ದಾರೆ ಮುಂದಿನ ದಿನಗಳಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.

One attachment • Scanned by Gmail