ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ


ಸಂಜೆವಾಣಿ ವಾರ್ತೆ
ಬಳ್ಳಾರಿ, ಫೆ.01: ಬೆಂಗಳೂರಿನ ಪಾರಿಜಾತದಲ್ಲಿ ನಿನ್ನೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಕಾರ್ಯಕಾರಿಣಿ  ಸಭೆ ನಡೆಸಲಾಯಿತು.
ಸಭೆಯಲ್ಲಿ ಈಗಾಗಲೇ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಂಘಟನೆ ಬಲಿಷ್ಠವಾಗಿದ್ದು ಇನ್ನುಳಿದ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಬಲಪಡಿಸುವ ವಿಚಾರವಾಗಿ ಚರ್ಚೆ ನಡೆಸಿದರು.
ಮತ್ತೊಮ್ಮೆ   ಮೋದಿಯವರು ಪ್ರಧಾನಮಂತ್ರಿಯಾಗಲು ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು,ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜೊತೆಯಲ್ಲಿ ಹೊಂದಾಣಿಕೆಗೆ ಮುಂದಾಗಿದ್ದಲ್ಲಿ ಮುಕ್ತವಾಗಿ ಪಕ್ಷದ ಕಾರ್ಯಕರ್ತರೆಲ್ಲರೂ ಕೂಡ ಬದ್ಧವಾಗಿರಬೇಕು ಎಂಬ ವಿಚಾರಗಳನ್ನು ಚರ್ಚಿಸಿದರು.
ಪಕ್ಷದ ಸ್ಥಾಪಕ ಗಾಲಿ ಜನಾರ್ಧನ ರೆಡ್ಡಿಯವರು ತೆಗೆದುಕೊಳ್ಳುವ ನಿರ್ಣಯಗಳಿಗೆ ಬದ್ಧರಾಗಿದ್ದೇವೆ ಎಂದು ಸಭೆಯಲ್ಲಿ ಒಕ್ಕೂರಲಿನಿಂದ ಪಕ್ಷದ ಎಲ್ಲಾ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು  ತೀರ್ಮಾನಿಸಿದರು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರುಗಳಾದ ಮನೋಹರ ಗೌಡ ಹೇರೂರ್, ಶ್ಲಲ ಗೋನಾಳ ರಾಜಶೇಖರ ಗೌಡ, ಮುನ್ನಾಭಾಯಿ, ಕೆ ಎಸ್ ದಿವಾಕರ್, ವೆಂಕಟರಮಣ, ಶ್ರೀಕಾಂತ ಬಂಡಿ,ರಾಜ್ಯ ಯುವ ಘಟಕದ ಅಧ್ಯಕ್ಷ ಭೀಮಾಶಂಕರ ಪಾಟೀಲ್, ಮಹಿಳಾ ಶಕ್ತಿ ಘಟಕದ ರಾಜ್ಯ ಅಧ್ಯಕ್ಷರಾದ ಶ್ರೀಮತಿ ಸಿಸಿ ಹೇಮಲತಾ,ಬಳ್ಳಾರಿ ಜಿಲ್ಲಾಧ್ಯಕ್ಷರಾದ ದಮ್ಮೂರ್ ಶೇಖರ, ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಆಚಾರ್, ಸುನೀಲ್ ರೆಡ್ದಿ, ಶ್ರೀನಿವಾಸ, ಶಲ ಕೊಪ್ಪಳ ಜಿಲ್ಲಾಧ್ಯಕ್ಷರಾದ ಸಂಗಮೇಶ ಬಾದವಾಡಗಿ ಸಭೆಯಲ್ಲಿ ಉಪಸ್ಥಿತರಿದ್ದರು.