ಕಳಪೆ ಕಾಮಗಾರಿ: ಪ್ರತಿಭಟನೆ

ಧಾರವಾಡ,ಜು12 : ಕಳಪೆ ಕಾಮಗಾರಿಯಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಧಾರವಾಡ ಮದಿಹಾಳ ಡಿಪೆÇೀ ಸರ್ಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಶಾಸಕ ಅಮೃತ ದೇಸಾಯಿ ಅವರ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಜನರ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ರಾಜಶೇಖರ ಕಮತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ, ಪ್ರಧಾನ ಕಾರ್ಯದರ್ಶಿ ಮಂಜುನಾಥ ನಡಟ್ಟಿ, ಕಾಂಗ್ರೆಸ್ ಮುಖಂಡ ಪ್ರಶಾಂತ ಕೇಕರೆ, ಕಾಂಗ್ರೆಸ್ ಮುಖಂಡ ಆನಂದ ಸಿಂಗನಾಥ, ಬಸವರಾಜ ಜಾಧವ, ಶಿವು ಚನ್ನಗೊಂಡ, ಪಾಲಿಕೆ ಸದಸ್ಯರಾದ ದೀಪಾ ನೀರಲಕಟ್ಟಿ, ಸೂರವ್ವ ಪಾಟೀಲ, ಮೈನು ನದಾಫ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೌರಮ್ಮ ಬೆಳ್ಳೊಗ್ಗಿ, ಸೂರಜ್ ಪುಟಕಲಕಟ್ಟಿ, ಎಸ್ಸಿ ಅಧ್ಯಕ್ಷ ಕರೆಪ್ಪ ಮಾಳಗಿ, ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.