ಕಳ್ಳತನ ಆರೋಪ: ಪಾನಮತ್ತರಿಂದ ವ್ಯಕ್ತಿ ಮೇಲೆ ಹಲ್ಲೆ

ವಿಜಯಪುರ,ಮೇ.27:ಕಳ್ಳತನ ಮಾಡಿದ ಆರೋಪ ಹಿನ್ನೆಲೆಯಲ್ಲಿ
ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಚಂದ್ರು ಬಬಲೇಶ್ವರ (28) ಹಲ್ಲೆಗೊಳಗಾದ ವ್ಯಕ್ತಿ.
ವಿಜಯಪುರ ಜಿಲ್ಲೆ ತಾಳಿಕೋಟೆ ಪಟ್ಟಣದ ಹೊರ ವಲಯದಲ್ಲಿ ಘಟನೆ ನಡೆದಿದೆ.
ಕುಡಿದ ಮತ್ತಿನಲ್ಲಿದ್ದವರು ಚಂದ್ರುನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಮಾಡಲಾಗಿದೆ.
ಎದೆ, ಹೊಟ್ಟೆ, ಕೈಗಳು ಹಾಗೂ
ಬೆನ್ನ ಮೇಲೆ ಬಾಸುಂಡೆ ಬರುವಂತೆ ಹಲ್ಲೆ ನಡೆಸಲಾಗಿದೆ.
ಸಿದ್ದಪ್ಪ ನಿಡಗುಂದಿ, ಸಮರ್ಥ ನಿಡಗುಂದಿ ಇತರರ ಸಹಚರರಿಂದ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ.
ಚಂದ್ರು ಬಬಲೇಶ್ವರ ಎಂಬುವನ ಮೇಲೆ ಕಳ್ಳತನ ಆರೋಪ ಹೊರಿಸಿದ್ದಾರೆ.
ಹಲ್ಲೆಗೀಡಾದ ಚಂದ್ರು ಎಂಬುವರಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆ ಮಾಡಿದವರ ವಿರುದ್ದ ತಾಳಿಕೋಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.