ಕಳ್ಳತನ ಪ್ರಕರಣ: ಪೊಲೀಸ್ ವಶದಲ್ಲಿದ್ದ ಆರೋಪಿ ಸಾವು

ಕಲಬುರಗಿ,ಆ.17-ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
“ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕನಗರ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ ಠಾಣೆಗೆ ಕರೆತರುತ್ತಿದ್ದರು. ಈ ವೇಳೆ ಆರೋಪಿ ಕುಸಿದು ಬಿದ್ದಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆತ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ” ಎಂದು ನಗರ ಪೊಲೀಸ್ ಆಯುಕ್ತ ಚೇತನ್ ಆರ್ ಅವರು “ಸಂಜೆವಾಣಿ”ಗೆ ತಿಳಿಸಿದ್ದಾರೆ.
ಹೃದಯಾಘಾತದಿಂದ ಸಾವನ್ನಪ್ಪಿರುವ ಆರೋಪಿಯನ್ನು ಸಿರಸಗಿ ಮಡ್ಡಿಯ ಉದಯ (50) ಎಂದು ಗುರುತಿಸಲಾಗಿದೆ.