ಕವಾಡಿಗರಹಟ್ಟಿ ಪ್ರಕರಣ; ತಕ್ಷಣವೇ ಸರ್ಕಾರದಿಂದ ಪರಿಹಾರ ಧನ ನೀಡಲು ಸೂಚನೆ

ಸಂಜೆವಾಣಿ ವಾರ್ತೆ
ಚಿತ್ರದುರ್ಗ. ಆ.೫; ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಮನೆಗಳಿಗೆ ಶುಕ್ರವಾರ ಸಂಜೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ಕೂಡಲೇ ಪರಿಹಾರ ನೀಡಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆ ವಿವರದ ಬಗ್ಗೆ  ಮುಖ್ಯಮಂತ್ರಿಗಳಿಗೆ ಚರ್ಚಿಸಿದ್ದೇನೆ. ಪರಿಹಾರ ನೀಡುವಲ್ಲಿ ವಿಳಂಬ ಸಲ್ಲದು. ರಾಜ್ಯ ಸರ್ಕಾರದ ನೀತಿಯಂತೆ ಪರಿಹಾರ ನೀಡುವುದರ ಜೊತೆಗೆ, ಸರ್ಕಾರದ ಸೌಲಭ್ಯಗಳನ್ನು ನೀಡುವ ಕುರಿತು ಕ್ರಮ ಕೈಗೊಳ್ಳÀಲಾಗುವುದು. ಕುಟುಂಬದವರ ನೋವಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಗ್ರಾಮಸ್ಥರಿಗೆ ನೀರಿನ ಮಾದರಿಗಳ ವಿಧಿ ವಿಜ್ಞಾನ ಪರೀಕ್ಷೆ ಮೇಲೆ ಅನುಮಾನ ಇದ್ದರೆ, ಪುನರ್ ತನಿಖೆ ಮಾಡಲಾಗುವುದು ಎಂದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಿಂದ ಮಾಹಿತಿ ಪಡೆದ ಸಚಿವರು, ಅಗತ್ಯ ಬಿದ್ದರೆ ಚಿಕಿತ್ಸೆ ಪಡೆಯುತ್ತಿರುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ದಾಖಲಿಸುವಂತೆ ತಿಳಿಸಿದರು.ಬಳಿಕ ಸಚಿವರು ನಗರದ ಖಾಸಗಿ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ಅಸ್ವಸ್ಥರ ಆರೋಗ್ಯ ವಿಚಾರಣೆ ಮಾಡಿದರು, ಅಲ್ಲದೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಕೆ.ಸಿ.ವಿರೇಂದ್ರ, ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಸೇರಿದಂತೆ ಮತ್ತಿರರು ಇದ್ದರು.