ಕವಿರತ್ನ ಕಾಳಿದಾಸ ಪದವಿ ಕಾಲೇಜಿನ ಸಿಬ್ಬಂದಿಗಳ ಕೋವಿಡ್-19 ಟೇಸ್ಟ

ಬೀದರ, ನ. 21ಃ ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ನಗರದ ಕವಿರತ್ನ ಕಾಳಿದಾಸ ಪದವಿ ಕಾಲೇಜಿನ್ನು ಸರ್ಕಾರದ ನಿಯಮದಂತೆ ದಿನಾಂಕ 17 ರಂದು ಪ್ರಾರಂಭಿಸಲಾಯಿತು.

ಇದೇ ಸಂದರ್ಭದಲ್ಲಿ ಕುಂಬಾರವಾಡಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ನೇತೃತ್ವದ ತಂಡ ಕಾಲೇಜಿಗೆ ಬಂದು ಕವಿರತ್ನ ಕಾಳಿದಾಸ ಪದವಿ ಕಾಲೇಜಿನ ಸಿಬ್ಬಂದಿಗಳ ಕೋವಿಡ್-19 ಹಿನ್ನಲೆಯಲ್ಲಿ ಗಂಟಲು ಮತ್ತು ಮೂಗಿನ ದ್ರವ್ಯದ ಪರೀಕ್ಷೆ ನಡೆಸಿದರು.

ಈ ಸಂದರ್ಭದಲ್ಲಿ ಕುಂಬಾರವಾಡಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿಗಳ ನೇತೃತ್ವದ ತಂಡವು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೋವಿಡ್-19 ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಕಿವಿಮಾತು ಹೇಳಿದರು.

ಈ ಕಾರ್ಯಕ್ರಮದಲ್ಲಿ ಕವಿರತ್ನ ಕಾಳಿದಾಸ ಪದವಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಗೂ ಕುಂಬಾರವಾಡಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿಗಳು ಇದ್ದರು.