ಕಸಾಪದಿಂದ ಕಲ್ಯಾಣ-ಕರ್ನಾಟಕ ಉತ್ಸವ ಆಚರಣೆ

ರಾಯಚುರು.ಸೆ.೧೭- ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕನ್ನಡ ಭವನದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಮಾಡುವ ಮೂಲಕ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು.
ರಾಷ್ಟ್ರ ಧ್ವಜಾರೋಹಣವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳು೦ಡಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಹನುಮಂತಪ್ಪ ಗವಾಯಿ, ವೆಂಕಟೇಶ್ ಬೇವಿನ ಬೆಂಚಿ ರಾವುತರಾವ್ ಬರೂರ, ರುದ್ರಯ್ಯ ಗುಣಾರಿ, ಈರಣ್ಣ ಬೆಂಗಾಲಿ, ಮನೋಹರ್ ಮುದುಕಪ್ಪ ಸೇರಿದಂತೆ ಕಾಲೇಜು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.