ಕಸಾಪ ಅಧ್ಯಕ್ಷರಿಗೆ ಕಲಾಕುಂಚದಿಂದ ಅಭಿನಂದನೆ


ದಾವಣಗೆರೆ, ನ.೨೭; ಕನ್ನಡ ಸಾಹಿತ್ಯ ಪರಿಷತ್ತನ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ದಾವಣಗೆರೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ವಿಜೇತರಾದ ಬಿ.ವಾಮದೇವಪ್ಪ ನಿನ್ನೆ ದಿನ ಕುವೆಂಪು ಕನ್ನಡ ಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಪದಾಧಿಕಾರಿಗಳು ಪುಸ್ತಕ ವಿತರಣೆಯೊಂದಿಗೆ ಅಭಿನಂದಿಸಿ ಗೌರವಿಸಿದರು.ವೇದಿಕೆಯಲ್ಲಿ ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ, ಕಲಾಕುಂಚ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಕಲಾಕಂಚದ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ, ಕಲಾಕಂಚದ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಗೌರವ ಅಧ್ಯಕ್ಷರಾದ ವಸಂತಿ ಮಂಜುನಾಥ್, ವಿದ್ಯಾನಗರ ಶಾಖೆಯ ಸಂಘಟನಾ ಕಾರ್ಯದರ್ಶಿ ಎ.ಕೊಟ್ರಪ್ಪ ಕಿತ್ತೂರು, ಕಲಾಕುಂಚ ಡಿ.ಸಿ.ಎಂ.ಶಾಖೆಯ ಅಧ್ಯಕ್ಷರಾದ ಶ್ರೀಮತಿ ಶಾರದಮ್ಮ ಶಿವನಪ್ಪ, ಕಲಾಕಂಚದ ಮಹಿಳಾ ವಿಭಾಗದ ಸಂಘಟನಾ ಕಾರ್ಯದರ್ಶಿ ಶ್ರೀಮತಿ ಕುಸುಮ ಲೋಕೇಶ್ ಮುಂತಾದವರು ಉಪಸ್ಥಿತರಿದ್ದರು.