ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧೆಗೆ ಒಲವು

ಗಂಗಾವತಿ ಜ.6: ಈ ಸಲ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ಜಿಲ್ಲೆಯ ಕಸಾಪದ ಸರ್ವ ಅಜೀವ ಸದಸ್ಯರು ಸಹಕಾರ ನೀಡಬೇಕು ಎಂದು ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ರಾಜಶೇಖರಗೌಡ ಮಾಲಿ ಪಾಟೀಲ ಮನವಿ ಮಾಡಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾನು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರೆ ಹೋಬಳಿ ಕೇಂದ್ರದಲ್ಲಿ ಸಹ ಕಸಾಪ ಭವನ ನಿರ್ಮಾಣ ಹಾಗೂ ಕನ್ನಡ ಶಾಲೆಗಳ ಸ್ಥಾಪನೆಗೆ ವಿಶೇಷ ಆದ್ಯತೆ ನೀಡುತ್ತೇನೆ. ಆದ್ದರಿಂದ ಜಿಲ್ಲೆಯ, ತಾಲೂಕಿನ ಕಸಾಪದ ಅಜೀವ ಸದಸ್ಯರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಕಸಾಪ ಜಿಲ್ಲಾಧ್ಯಕ್ಷ ಸ್ಥಾನವನ್ನು ಗಂಗಾವತಿಗೆ ನೀಡಲಾಗುವುದು ಎಂದು ಭರವಸೆ ನೀಡಿದರು. ಙಸುದ್ದಿಗೋಷ್ಠಿಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ, ಬಸವರಾಜ್ ಆಡೂರು, ರಮೇಶ ಕುಲಕರ್ಣಿ ಇದ್ದರು.