ಕಸಾಪ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ


ಯೋಗ ನಾಗರಾಜ್ ನೇಮಕ
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.10:  ನಗರದ ಎನ್.ನಾಗರಾಜ್‌ ಯೋಗ ಅವರನ್ನು  ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಕಸಾಪದ ಅಧ್ಯಕ್ಷ ಡಾ. ಮಹೇಶ್‌ ಜೋಶಿ  ಆದೇಶ ಮಾಡಿದ್ದಾರೆ.
ಪರಿಷತ್ತಿನ ಎಲ್ಲ ಕಾರ್ಯಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಭಾಗಗಳಿಗೆ ಪ್ರವಾಸ ಮಾಡುತ್ತಾ ಕಾರ್ಯನಿರ್ವಹಿಸುವ ಸಲುವಾಗಿ ಸಂಘಟನಾ ಕಾರ್ಯದರ್ಶಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ನಡೆಯುವ ಕಸಾಪದ ಎಲ್ಲಾ ಸಭೆ ಸಮಾರಂಭ ಹಾಗೂ ಸಮ್ಮೇಳನಗಳಿಗೆ ವಿಶೇಷ ಆಹ್ವಾನಿತರಾನ್ನಾಗಿ ಭಾಗವಹಿಸಲು ಸೂಚಿಸಲಾಗಿದೆ.