ಕಸಾಪ ವಾರ್ಷಿಕ ಸಾಮಾನ್ಯ ಸಭೆ*

ಸಂಜೆವಾಣಿ ವಾರ್ತೆ

ದಾವಣಗೆರೆ. ಮಾ.೪; ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 107 ನೆಯ ಹಾಗೂ 2022-23 ನೆಯ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಾ.10 ರ  ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿರುವ ಶ್ರೀ ರಾಘವೇಂದ್ರ ಜ್ಞಾನ ಮಂದಿರದಲ್ಲಿ ಕೇಂದ್ರ ಕಸಾಪ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಇವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳು ಕಡ್ಡಾಯವಾಗಿ ತಮ್ಮ ಪರಿಷತ್ತಿನ ಗುರುತಿನ ಚೀಟಿ ಅಥವಾ  ಪ್ರಜಾ ಪ್ರಾತಿನಿಧ್ಯ ಕಾಯ್ದೆ ಅನ್ವಯ ಸೂಚಿಸಿರುವ ಯಾವುದಾದರೂ ಒಂದು ಗುರುತಿನ ಚೀಟಿಯೊಂದಿಗೆ ಹಾಜರಾಗಿ ಚರ್ಚೆಯಲ್ಲಿ ಭಾಗವಹಿಸಬೇಕು ಎಂದು ಚನ್ನಗಿರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಲ್.ಜಿ.ಮಧುಕುಮಾರ್ ಮನವಿ ಮಾಡಿದ್ದಾರೆ.