ಕಸ್ತೂರಿ ಮಹಲ್ ಪ್ರಥಮ ಪ್ರತಿ ಸಿದ್ದ

ಹಿರಿಯ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ “ಕಸ್ತೂರಿ ಮಹಲ್’ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಸೆನ್ಸಾರ್ ಮಂಡಳಿ ಮುಂದೆ ಹೋಗಲಿದೆ. ಹಾರರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರಕ್ಕೆ ದಿನೇಶ್ ಬಾಬು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.ಇದು ಅವರ ೫೦ನೇ ಚಿತ್ರ ನಿರ್ದೇಶನದ ಚಿತ್ರ. “ಕಸ್ತೂರಿ ಮಹಲ್ ನ ಟೀಸರ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್ , ಅಕ್ಷರ್ ಮುಂತಾದವರಿದ್ದಾರೆ.
ರವೀಶ್ ಆರ್ ಸಿ, ನವೀನ್ ಆರ್ ಸಿ ಹಾಗೂ ಅಕ್ಷಯ್ ಸಿ.ಎಸ್ ನಿರ್ಮಾಣವಿದೆ . ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಹರೀಶ್ ಕೃಷ್ಣ ಚಿತ್ರಕ್ಕಿದೆ.