ಕಸ ಸಂಗ್ರಹಣೆ ವಾಹನ ಮಹಿಳೆರ ನೇಮಕಕ್ಕೆ ಸೂಚನೆ

ರಾಯಚೂರು, ನ,೨೩- ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮತ್ತು ಸಂಗ್ರಹಣಾ ವಾಹನಕ್ಕೆ ಕಡ್ಡಾಯವಾಗಿ ಮಹಿಳೆರನ್ನು ನೇಮಕ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ ಅವರು ಸಂಬಂಧಸಿದ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಸ ವಿಲೇವಾರಿ ಮತ್ತು ಸಂಗ್ರಹಣೆ ಮಾಡುವ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಸ ವಿಲೇವಾರಿ ಮತ್ತು ಸಂಗ್ರಹಣೆ ಮಾಡುವ ಕೆಲಸಕ್ಕೆ ಮಹಿಳಾ ಸಂಘದ ಅಡಿಯಲ್ಲಿ ತರಬೇತಿ ಪಡೆದ ಮಹಿಳೆಯರಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಮತ್ತು ವಿಲೇವಾರಿ ಮಾಡುವುದು ಮಹಿಳೆಯರ ಜವಾಬ್ದಾರಿಯಾಗಿದೆ. ಜಿಲ್ಲೆಯಲ್ಲಿ ೩೨ ಮಹಿಳೆಯರಿಗೆ ಚಾಲಕ ಪರವಾನಿಗೆ ನೀಡಲಾಗಿದೆ. ತಕ್ಷಣವೇ ಮಹಿಳೆರನ್ನು ನೇಮಕ ಮಾಡಿಕೊಳ್ಳುವಂತೆ ಅದೇಶಿಸಿದರು.
ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಸ ವಿಲೇವಾರಿ ಮಾಡಲು ಮಹಿಳೆರನ್ನು ನೇಮಕ ಮಾಡಿಕೊಳ್ಳುವಂತೆ ಆದೇಶಿಸಿದರು. ಯಾಕೆ ಮಹಿಳೆರನ್ನು ನೇಮಕಾತಿ ಮಾಡಿಕೊಂಡಿಲ್ಲ ಎಂದು ಅಧಿಕಾರಿಗಳಿಗೆ ಪ್ರೆಶ್ನೆಸಿದರು?.೧೫ ದಿನಗಳ ಒಳಗಡೆ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಿಳಾ ಸಂಘದಿಂದ ತರಬೇತಿ ಪಡೆದ ಮಹಿಳೆರನ್ನು ತಕ್ಷಣವೇ ನೇಮಕಾತಿ ಮಾಡಿಕೊಳ್ಳಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಯೋಜನಾಧಿಕಾರಿ ಪ್ರಕಾಶ್, ಪಂಚಾಯತ್ ಅಭಿವೃದ್ಧಿಕಾರಿಗಳು, ಮಹಿಳೆರು ಸೇರಿದಂತೆ ಉಪಸ್ಥಿತರಿದ್ದರು.