`ಕಾಂಗರೂ’ ಟ್ರೈಲರ್ ಅನಾವರಣ

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಕಾಂಗರೂ” ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ.

ಆದಿತ್ಯ ಮತ್ತು ರಂಜನಿ ರಾಘವನ್ ಪ್ರಧಾನ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಚಿತ್ರ ಮುಂದಿನ ತಿಂಗಳ ಮೊದಲವಾರ ತೆರೆಗೆ ಬರಲಿದೆ.

ಟ್ರೈಲರ್ ಬಿಡುಗಡೆ ವೇಳೆ ಮಾತಿಗಿಳಿದ ನಟ ಆದಿತ್ಯ, ಚಿತ್ರದ ಕಥೆಯನ್ನು ನಿರ್ದೆಶಕರು ಅನಿಮೇಶನ್ ಮೂಲಕ ತೋರಿಸಿದರು ಚಿತ್ರದಲ್ಲಿ ಪೆÇಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಚಿತ್ರ ಚೆನ್ನಾಗಿ ಬಂದಿದೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರ ಸೇರಿದಂತೆ ಎಲ್ಲಾ ಕನ್ನಡ ಚಿತ್ರಗಳನ್ನು ಚಿತ್ರಮಂದಿರಗಳಲ್ಲೇ ನೋಡಿ ಎಂದು ಮನವಿ ಮಾಡಿದರು

ನಟಿ ರಂಜನಿ ರಾಘವನ್ ಮಾತನಾಡಿ ಚಿತ್ರದಲ್ಲಿ ಮನೋವೈದ್ಯೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನಾಯಕಿಯಾಗಿ ನಟಿಸಿರುವ ಐದನೇ ಚಿತ್ರ . ಇದುವರೆಗಿನ ಎಲ್ಲಾ ಚಿತ್ರಕ್ಕಿಂತ ವಿಭಿನ್ನವಾದ ಪಾತ್ರ ಎಂದರು.

ನಿರ್ದೇಶಕ ಕಿಶೋರ್ ಮೇಗಳ ಮನೆ ಮಾತನಾಡಿ, ಸಾಕಷ್ಟು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಬಂದಿವೆಯಾದರೂ, ನಮ್ಮ ಚಿತ್ರ ಸ್ವಲ್ಪ ವಿಭಿನ್ನ. ಫ್ಯಾಮಿಲಿ ಆಡಿಯನ್ಸ್ ಗಾಗಿಯೇ ಮಾಡಿರುವ ಕಥೆ ಇದುಕಾಂಗರೂ ಮೃದುಸ್ವಭಾವದ ಪ್ರಾಣಿ. ಯಾರ ತಂಟೆಗೂ ಹೋಗುವುದಿಲ್ಲ. ಆದರೆ ತನ್ನ ಮಕ್ಕಳ ತಂಟೆಗೆ ಬಂದರೆ ಅದು ಯಾರನ್ನು ಬಿಡುವುದಿಲ್ಲ. ಇದೇ ಚಿತ್ರದ ಕಥಾಸಾರಾಂಶ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಮ್ಮ ಚಿತ್ರ ನಿರ್ಮಾಣವಾಗಿದೆ ಎಂದರು.

ಚನ್ನಕೇಶವ ಬಿ.ಸಿ, ಕುಣಿಗಲ್, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ಆರ್ ಗೌಡ  ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ನಟಿಸಿರುವ ನಾಗೇಂದ್ರ ಅರಸ್, ಅಶ್ವಿನ್ ಹಾಸನ್, ಶುಭಲಕ್ಷ್ಮೀ, ಗೌತಮ್ ಮತ್ತಿತರರು ಮಾಹಿತಿ ಹಂಚಿಕೊಂಡರು. ಸಾಧುಕೋಕಿಲ ಸಂಗೀತ,ಉದಯಲೀಲಾ ಛಾಯಾಗ್ರಹಣವಿದೆ.