
ಚಿಂಚೋಳಿ,ಮೇ.4-ರಾಜ್ಯ ಮಟ್ಟದಲ್ಲಿ ಸಭೆ ಸೇರಿದ ದಲಿತ ಸಂಘಟನೆಗಳ ಸಮನ್ವಯ ಸಮಿತಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿರುವುದು ವಿಷಾದಕರ ಸಂಗತಿಯಾಗಿದೆ. ಇದು ದಲಿತ ಸಂಘರ್ಷ ಸಮಿತಿಯ ಪಕ್ಷಾತೀತ ಹೋರಾಟಕ್ಕೆ ಶೋಭೆ ತರುವಂತಹದಲ್ಲ ಎಂದು ಹಿರಿಯ ಸಮಾಜ ಸೇವಕ ರಮೇಶ ಯಾಕಾಪೂರ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ದಲಿತ ಸಂಘರ್ಷ ಸಮಿತಿ (ದಸಂಸ) ಅಸ್ತಿತ್ವಕ್ಕೆ ಬಂದು ಅದರದೇ ಆದ ತತ್ವಸಿದ್ಧಾಂತಗಳನ್ನು ರೂಪಿಸಿಕೊಂಡು ಪಕ್ಷಾತೀತವಾಗಿ ಹೋರಾಟ ನಡೆಸುತ್ತ ಬಂದಿದೆ. ಕಾಲಕಾಲಕ್ಕೆ ವಿಭಜನೆಗೊಂಡು ಬಣಗಳಾಗಿ ಹೋರಾಟ ಮುಂದುವರಿಸಿದೆ. ಆದರೆ ಇದೀಗ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿರುವುದು ಸರಿಯಾದ ಕ್ರಮವಲ್ಲ ಎಂದು ಅವರು ತಿಳಿಸಿದ್ದಾರೆ.