ಕಾಂಗ್ರೆಸ್‌ಗೆ ಮತ ನೀಡಿ: ಗೌತಮ್ ಮನವಿ

ಮಾಲೂರು, ಏ.೨೪- ದೇಶದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷವನ್ನು ಕಿತ್ತೊಗೆದು ಎಲ್ಲಾ ಜಾತಿ ಧರ್ಮದವರು ನೆಮ್ಮದಿಯ ಜೀವನ ನಡೆಸಲು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ ವಿ ಗೌತಮ್ ಮನವಿ ಮಾಡಿದರು.
ತಾಲೂಕಿನ ಟೇಕಲ್ ಮಾಸ್ತಿ ಸಂತೆಹಳ್ಳಿ ಲಕ್ಕೂರು ಗ್ರಾಗಳಲ್ಲಿ ಮತ ಯಾಚಿಸಿ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇತಿಹಾಸವಿದೆ. ಸ್ವಾತಂತ್ರ ಪೂರ್ವದಲ್ಲಿ ಬ್ರಿಟಿಷರು ಭಾರತವನ್ನು ಬಿಟ್ಟು ಹೋದಾಗ ದೇಶದ ಬೊಕ್ಕಸ ಖಾಲಿಯಾಗಿತ್ತು. ನಂತರ ಆಡಳಿತಕ್ಕೆ ಬಂದ ಕಾಂಗ್ರೆಸ್ ಪಕ್ಷದ ಸರ್ಕಾರ ಸಂಪನ್ಮೂಲ ಕ್ರೂಢೀಕರಣ ಮಾಡಿಕೊಳ್ಳುವುದರ ಜೊತೆಗೆ ದೇಶವನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಎಲ್ಲಾ ಜಾತಿ ಜನಾಂಗದವರಿಗೆ ಸಂವಿಧಾನದ ಆಶಯದಡಿ ಈ ಹಿಂದೆ ದೇಶ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ಬಡವರು ದೀನ ದಲಿತರು ಹಿಂದುಳಿದ ವರ್ಗದವರು ರೈತರು ಮಹಿಳೆಯರು ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಕಾರ್ಯರೂಪಕ್ಕೆ ತಂದಿದೆ. ಡಾ.ಅಂಬೇಡ್ಕರ್ ಅವರ ಆಶಯದಂತೆ ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ವರ್ಗದವರಿಗೂ ಸಾಮಾಜಿಕ ನ್ಯಾಯವನ್ನು ನೀಡುವದರ ಮೂಲಕ ಉತ್ತಮ ಆಡಳಿತ ನೀಡುತ್ತಾ ಬಂದಿದೆ. ಆದರೆ ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಜನಸಾಮಾನ್ಯರಿಗೆ ಸುಳ್ಳು ಭರವಸೆಗಳನ್ನು ನೀಡುವುದರ ಮೂಲಕ ಅಧಿಕಾರಕ್ಕೆ ಬಂದ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಗಗನಕ್ಕೇರಿದೆ ಬೆಲೆ ನಿಯಂತ್ರಣ ದೇಶದ ಅಭಿವೃದ್ಧಿಗಾಗಿ ಕೇಂದ್ರದಲ್ಲಿ ಐ.ಎನ್.ಡಿ.ಐ.ಎ ಒಕ್ಕೂಟ ಬಹುಮತ ಬರಲಿದ್ದು ರಾಹುಲ್ ಗಾಂಧಿಯವರು ಪ್ರಧಾನ ಮಂತ್ರಿ ಆಗಲಿದ್ದಾರೆ.
ಕಾಂಗ್ರೆಸ್ ಭದ್ರಕೋಟೆಯಾಗಿರುವ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ ೨೬ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನ ದಿನದಂದು ಪ್ರತಿಯೊಬ್ಬ ನಾಗರಿಕರು ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡುವುದರ ಮೂಲಕ ಆಶೀರ್ವಾದ ಮಾಡುವಂತೆ ತಿಳಿಸಿದರು.
ಶಾಸಕ ಕೆ ವೈ ನಂಜೇಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಇತಿಹಾಸವಿದೆ ಜಾತ್ಯತೀತ ಪಕ್ಷವಾಗಿದೆ ಎಲ್ಲಾ ಜಾತಿ ಜನಾಂಗದವರು ಧರ್ಮದವರನ್ನು ಸಹೋದರತೆಯಿಂದ ಒಗ್ಗಟ್ಟಾಗಿ ಕರೆದೊಯ್ಯುವ ಕೆಲಸ ಮಾಡಲಾಗುತ್ತಿದೆ ಕೇಂದ್ರದಲ್ಲಿ ೬೦ ವರ್ಷಗಳ ಕಾಲ ಆಡಳಿತವನ್ನು ನಡೆಸಿರುವ ಕಾಂಗ್ರೆಸ್ ಪಕ್ಷವು ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಅಲ್ಲದೆ ದೇಶದ ಅಭಿವೃದ್ಧಿಗೆ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಕಳೆದ ೧೦ ತಿಂಗಳ ಹಿಂದೆ ಆಡಳಿತಕ್ಕೆ ಬಂದ ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರವು ನುಡಿದಂತೆ ನಡೆದಿದೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ೫ ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಳಿಸಿ ಜನರ ಕಷ್ಟ ಸುಖಗಳಿಗೆ ನೆರವು ನೀಡಿದೆ ಗ್ಯಾರಂಟಿ ಯೋಜನೆಗಳ ಪಡೆಯುತ್ತಿರುವ ಫಲಾನುಭವಿಗಳು ಹಾಗೂ ಯುವಕ ಯುವತಿಯರು ದೇಶದಲ್ಲಿ ಸುಭದ್ರ ಸರ್ಕಾರ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ರಾಜ್ಯದಲ್ಲಿ ಇಪ್ಪತ್ತಕ್ಕೂ ಹೆಚ್ಚು ಸಂಸದರನ್ನು ಗೆಲ್ಲಿಸಲಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ. ಜನರ ಪರವಾದ ಸರ್ಕಾರವಾಗಿದೆ ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿ ವರ್ಷ ೬೫,೦೦೦ ಕೋಟಿ ಖರ್ಚು ಮಾಡಲಾಗುತ್ತಿದೆ
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ೧೦ ತಿಂಗಳಲ್ಲಿ ಆಲೂರು ತಾಲೂಕಿನ ಅಭಿವೃದ್ಧಿಗೆ ೬೦೦ ಕೋಟಿಗೂ ಹೆಚ್ಚು ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದು ಮುಂಬರುವ ದಿನಗಳಲ್ಲಿ ರಾಜ್ಯ ಸರ್ಕಾರದಿಂದ ಮತ್ತಷ್ಟು ಅನುದಾನವನ್ನು ತಂದು ಅಭಿವೃದ್ಧಿಪಡಿಸಲು ತಾಲೂಕಿನ ಜನತೆ ನನ್ನ ಕೈ ಬಲಪಡಿಸಲು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿ ಕೆ ವಿ ಗೌತಮ್ ರವರಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಬೇಕು.
ಕಾರ್ಯಕರ್ತರು ಮುಖಂಡರು ಬೂತ್ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನಸಾಮಾನ್ಯರಿಗೆ ಪ್ರಚಾರಪಡಿಸುವ ಮೂಲಕ ಪಕ್ಷವನ್ನು ಬಲಗೊಳಿಸಿ ಅಭ್ಯರ್ಥಿಯ ಪರವಾಗಿ ಮತಯಾಚಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಹೇಳಿದರು.
ಮಾಜಿ ಶಾಸಕ ಎ ನಾಗರಾಜು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಿ ಲಕ್ಷ್ಮಿ ನಾರಾಯಣ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂಜಿ ಮಧುಸೂದನ್ ಎಚ್‌ಎಂ ವಿಜಯನರಸಿಂಹ ಮುಖಂಡರಾದ ಎಚ್ ವಿ ಚಂದ್ರಶೇಖರ್ ಗೌಡ ವೀರಭದ್ರಪ್ಪ ಎಲ್ ಮಂಜುನಾಥ್ ಸಂದೇಗೌಡ ಆನೆಪುರ ಹನುಮಂತಪ್ಪ ಅಂಜನಿ ಸೋಮಣ್ಣ ಪ್ರದೀಪ್ ರೆಡ್ಡಿ ಸತೀಶ್ ರಾಜಣ್ಣ ಲಕ್ಕೂರ್ ಬಾಬು ಕೃಷ್ಣಾರೆಡ್ಡಿ ಕೋಡಿಹಳ್ಳಿ ಮಂಜುನಾಥ್ ಇನ್ನಿತರರು ಹಾಜರಿದ್ದರು