ಕಾಂಗ್ರೆಸ್‍ನಿಂದ ಪ್ರತಿಭಟನೆ

ಹುಬ್ಬಳ್ಳಿ,ಮಾ24 : ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧದ ಹೇಳಿಕೆಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶಿಕ್ಷೆ ಪ್ರಕಟ ಹಿನ್ನಲೆಯಲ್ಲಿ ಹು-ಧಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಗರದ ದುರ್ಗದಬೈಲ್ ನಲ್ಲಿ ಪ್ರತಿಭಟನೆ ನಡೆಯಿತು.
ಹು-ಧಾ ಮಹಾನಗರ ಜಿಲ್ಲಾಧ್ಯಕ್ಷರಾದ ಅಲ್ತಾಫ್ ಹಳ್ಳೂರ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ಸದಾನಂದ ಡಂಗನವರ, ನಿರಂಜನಯ್ಯಾ ಹಿರೇಮಠ, ಪ್ರಕಾಶ ಬುರಬುರೆ, ದೀಪಾ ಗೌರಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.