ಕಾಂಗ್ರೆಸ್‍ನಿಂದ ಬಡವರಿಗೆ ಸ್ವಾಭಿಮಾನದ ಬದುಕು :ದರ್ಶನಾಪುರ

RemasterDirector_1a5c03258

ಯಾದಗಿರಿ ,ಏ 23: ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಸ್ವಾಭಿಮಾನದ ಬದುಕು ನೀಡಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಹೇಳಿದರು.
ಇಂದು ಅವರು ಕಲಬುರಗಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಸೈದಾಪುರದಲ್ಲಿ
ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳಿಂದ ಕಂಗೆಟ್ಟ ಬಿಜೆಪಿ ಪಕ್ಷವು ಜನರ ದಾರಿ ತಪ್ಪಿಸುತ್ತಿದೆ.ಇವು ಪೊಳ್ಳು ಗ್ಯಾರಂಟಿ ಎಂದು ಅಪಪ್ರಚಾರ ಮಾಡುತ್ತಿದೆ. ಆದರೆ ಅವರ ಆರೋಪ ಪೊಳ್ಳು ಎಂದು ಗುಡುಗಿದರು.
ಸಭೆಯಲ್ಲಿ ರಾಧಾಕೃಷ್ಣ ದೊಡ್ಡಮನಿ, ಮಾಜಿ ಸಚಿವ ಬಾಬುರಾವ್ ಚಿಂಚನಸೂರ್,ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರ ಡೆವಿಡ್ ಸಿಮೆಯೋನ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಪಾಲ್ಗೊಂಡರು.