ಕಾಂಗ್ರೆಸ್ಸಿಗೆ ಫಾತೀಮಾ ರಾಜೀನಾಮೆ

ರಾಯಚೂರು.ಸೆ.೨೧- ಕಾಂಗ್ರೆಸ್ ಪಕ್ಷಕ್ಕೆ ಡಾ.ಫಾತೀಮಾ ಹುಸೇನ್ ಅವರು ರಾಜೀನಾಮೆ ನೀಡಿದ್ದಾರೆ. ಜಿಲ್ಲಾಧ್ಯಕ್ಷರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಕಳೆದ ೧೮ ವರ್ಷಗಳಿಂದ ಪಕ್ಷಕ್ಕೆ ಸೇವೆ ಸಲ್ಲಿಸಿದ್ದು, ಈಗ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.