ಕಾಂಗ್ರೆಸ್ ಅದ್ಧೂರಿ ಸಮಾವೇಶ

ಕಲಬುರಗಿ:ಏ.12: ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತ ಯಾಚನೆ ಮಾಡುವ ನಿಟ್ಟಿನಲ್ಲಿ ಇಲ್ಲಿನ ನೂತನ ವಿದ್ಯಾಲಯ ಸಂಸ್ಥೆ ಆವರಣದಲ್ಲಿ ಅದ್ಧೂರಿ ಕಾಂಗ್ರೆಸ್ ಸಮಾವೇಶ ನಡೆಯಿತು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ರಾಧಾಕೃಷ್ಣ ಅವರ ಪರ ಹಲವು ನಾಯಕರು ಮತ ಯಾಚನೆ ಮಾಡಿದರು.

ಕಾಂಗ್ರೆಸ್ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ, ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಅಜಯಸಿಂಗ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ,
ಮಾಜಿ ಸಚಿವರಾದ ಬಾಬುರಾವ್ ಚಿಂಚನ್ಸೂರ್, ರೇವುನಾಯಕ ಬೆಳಮಗಿ, ವಿ.ಎಸ್.ಉಗ್ರಪ್ಪ, ಶಾಸಕರಾದ ಎಂ.ವೈ.ಪಾಟೀಲ್, ಗುಲ್ಬರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶರಣಕುಮಾರ್ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಜರ್ ಆಲಂಖಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್ ಹಾಗೂ ಇತರರಿದ್ದರು.


ಬಿಜೆಪಿ ಹಿಂದೂ ಮುಸ್ಲಿಮರನ್ನು ವಿಭಜಿಸುವ ರಾಜಕೀಯ ಮಾಡುತ್ತಿದ್ದರೆ ಕಾಂಗ್ರೆಸ್ ಕರ್ನಾಟಕದಲ್ಲಿ ಎಲ್ಲ ವರ್ಗಗಳ ಜನರಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಎಲ್ಲರನ್ನೂ ಬೆಸೆಯುವ ಕೆಲಸ ಮಾಡುತ್ತಿದೆ.

  • ಎಚ್.ಎಂ.ರೇವಣ್ಣ, ಮಾಜಿ ಸಚಿವ

ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ, ರೈತರು ಹಾಗೂ ಬಡವರು ಆತಂಕ ಎದುರಿಸುವಂತಾಗಿದೆ. ಇಡೀ ವ್ಯವಸ್ಥೆಯನ್ನು ಹೈಜಾಕ್ ಮಾಡಿ ಆರ್.ಎಸ್.ಎಸ್ ಕೈಗೆ ಎಲ್ಲವನ್ನೂ ನೀಡಲಾಗುತ್ತಿದೆ. ಆ ಮೂಲಕ ವರ್ಣಾಶ್ರಮ ವ್ಯವಸ್ಥೆ ಜಾರಿಗೆ ತರುವ ಸಂಚು ನಡೆದಿದೆ.

  • ಬಿ.ಆರ್.ಪಾಟೀಲ್

ಮುಖ್ಯಮಂತ್ರಿಗಳ ಸಲಹೆಗಾರ

ಈಗಾಗಲೇ ರಾಜ್ಯ ಸರಕಾರ ಪಂಚ ಗ್ಯಾರಂಟಿಗಳನ್ನು ಕೊಟ್ಟು ತಾನು ಬಡವರ ಪರ ಎಂಬುದನ್ನು ಸಾಬೀತುಪಡಿಸಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತಷ್ಟು ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಲಿವೆ. ಹಾಗಾಗಿ, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು.

  • ಕನೀಜ್ ಫಾತಿಮಾ
    ರೇಷ್ಮೆ ಅಭಿವೃದ್ಧಿ ನಿಗಮ

ದೇಶದ ಜನರು ಬದಲಾವಣೆ ಬಯಸುತ್ತಿದ್ದಾರೆ. ಹಾಗಾಗಿ, ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ರಚನೆ ಬಹುತೇಕ ಖಚಿತ ಎನ್ನುವಂತಹ ವಾತಾವರಣ ಎಲ್ಲೆಡೆ ಕಂಡುಬರುತ್ತಿದೆ

  • ಅಲ್ಲಮಪ್ರಭು ಪಾಟೀಲ್
    ಶಾಸಕರು, ಕಲಬುರಗಿ ದಕ್ಷಿಣ ಕ್ಷೇತ್ರ