
ಆಳಂದ:ಮಾ.7: ನನ್ನ ಕುರಿತು ಕಾಂಗ್ರೆಸ್ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ. ದಯವಿಟ್ಟು ವೀರಶೈವ ಲಿಂಗಾಯತರು ಯಾವುದೇ ಕಾರಣಕ್ಕೂ ಕಿವಿಗೊಡಬೀಡಿ ಎಂದು ನಾನು ಕೈಮುಗಿದು ನಿಮ್ಮಲ್ಲಿ ಕಳಕಳಿಯಿಂದ ವಿನಂತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮನವಿ ಮಾಡಿದರು.
ಪಟ್ಟಣದ ಶ್ರೀರಾಮ ಮಾರುಕಟ್ಟೆಯಲ್ಲಿ ಹಮ್ಮಿಕೊಂಡ ಬಿಜೆಪಿ ವಿಜಯ್ ಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶದಲ್ಲಿ ಅಭಿಮಾನಿಗಳು ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ನನಗೆ ಬಿಜೆಪಿಯಲ್ಲಿ ಕಡೆಗಣಿಸಲಾಗಿದೆ, ನಿರ್ಲಕ್ಷಿಸಲಾಗುತ್ತಿದೆ, ಅವಮಾನ ಮಾಡಲಾಗುತ್ತಿದೆ. ನನಗೆ ಮುಖ್ಯಮಂತ್ರಿ ಹುದ್ದೆಯಿಂದ ತೆಗೆದುಹಾಕಿದ್ದಾರೆ. ರಾಜಕೀಯವಾಗಿ ಮೂಲೆಗುಂಪು ಮಾಡಿದ್ದಾರೆ ಎಂಬ ಅಪಪ್ರಚಾರವನ್ನು ಕಾಂಗ್ರೆಸ್ಸಿಗರು ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಯಾವುದೀ ರೀತಿಯಲ್ಲಿ ಹುರುಳಿಲ್ಲ ಎಂದರು.
ಬಿಜೆಪಿಯಲ್ಲಿ ನನಗೆ ಸಿಕ್ಕ ಗೌರವ ಹಾಗೂ ಅವಕಾಶಗಳಿಂದಾಗಿ ನಾನು ನಾಲ್ಕು ಬಾರಿ ಕರ್ನಾಟಕದ ಮುಖ್ಯಮಂತ್ರಿಯ ಶಾಸಕ, ಸಂಸದನಾಗಿ, ಸಚಿವನಾಗಿ, ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿಯಯಾಗಿ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ. ನಾನಾಗಿಯೀ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಕ್ಟ್ಟು ಬಸವರಾಜ್ ಬ್ಮ್ಮಾಯಿ ಅವರಿಗೆ ವಹಿಸಿಕ್ಟ್ಟಿದ್ದೇನೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೀದಿ ಹಾಗೂ ರಾಜ್ಯದಲ್ಲಿ ಬಸವರಾಜ್ ಬ್ಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರಗಳು ಅತ್ಯುತಮವಾಗಿ ಕಾರ್ಯನಿರ್ವಹಿಸುತಿದ್ದು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರುವುದು ಸೂರ್ಯ, ಚಂದ್ರ ಇರುªಷ್ಟೇ ಸತ್ಯ ಎಂದು ಅವರು ಹೇಳಿದರು.
ಮೊನ್ನೆ ನಡೆದ ಅಧಿವೀಶನದಲ್ಲಿ ಇನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು
ಹೇಳಿದ್ದೇನೆ ಹೊರತು, ರಾಜಕೀಯದಿಂದ ನಿವೃತ್ತಿ ಅಲ್ಲ. ಆದಾಗ್ಯೂ, ನಾನು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಸಂಚರಿಸುತ್ತೇನೆ ಎಂದು ಅಧಿವೇಶನದಲ್ಲಿ ಹೇಳಿರುವ ರೀತಿಯಲ್ಲೇ ಸಂಚಾರ ಮಾಡುತ್ತಿದ್ದೇನೆ ಎಂದು ಅವರು ತಿಳಿಸಿದರು.
ಹೀಗಾಗಿ ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಹಣ, ತೋಳಬಲ, ಅಧಿಕಾರ ಬಲ ಹಾಗೂ ಜಾತಿ ಬಲದ ಮೂಲಕ ಗೆಲ್ಲಲು ಹೊರಟಿದೆ. ಅದು ತಿರುಕನ ಕನಸಷ್ಟೇ ಎಂದು ಲೇವಡಿ ಮಾಡಿದ ಅವರು, ಕರ್ನಾಟಕದಲ್ಲಿ ನಾಲ್ಕು ರಥಗಳು 224 ಕ್ಷೇತ್ರಗಳಿಗೆ ಭೇಟಿ ಕೊಡಲಿವೆ. ಮಾರ್ಚ್? 25ರಂದು ದಾವಣಗೆರೆಯಲ್ಲಿ ಬೃಹತ್ ಸಭೆ ಜರುಗಲಿದೆ. ಮಹಾನ್ ನಾಯಕ ನರೇಂದ್ರ ಮೋದಿ ಅವರು ಆಗಮಿಸುವರು. ಈಗ ಕಲ್ಯಾಣವು ಹೇಗೆ ಅಭಿವೃದ್ಧಿ ಆಗಿದೆ ಎಂಬುದನ್ನು ಗಮನಿಸಿ, ಪ್ರಧಾನಿ ಮೋದಿಜಿ, ಅಮಿತ್ ಶಾಜಿ ಅವರ ನೇತೃತ್ವದಲ್ಲಿ ಬಿಜೆಪಿ ಕರ್ನಾಟಕದಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಅದಕ್ಕೆ ನಿಮ್ಮ ಬೆಂಬಲದ ಭಾಗವಾಗಿ ಸುಭಾಷ ಗುತ್ತೇದಾರ ಅವರನ್ನು ಗೆಲ್ಲಿಸಬೇಕು ಎಂದು ಅವರು ಜನತೆಗೆ ಕರೆ ನೀಡಿದರು.
ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಡಾ. ಉಮೇಶ ಜಾಧವ, ಎಂಎಲ್‍ಸಿ ಶಶೀಲ ಜಿ. ನಮೋಶಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.