
ದಾವಣಗೆರೆ.ಏ.೨೪: ಜಿಲ್ಲೆಯ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ವಿಶ್ವಾಸ ವ್ಯಕ್ತಪಡಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳು ಭಾರೀ ಬಹುಮತದಿಂದ ಗೆಲ್ಲಲಿದ್ದಾರೆ ಎಂದರು.ಜಿಲ್ಲೆಯಲ್ಲಿ ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯುವ ವಿಶ್ವಾಸ ಇದೆ. ಹರಿಹರದ ಶಾಸಕ ಎಸ್. ರಾಮಪ್ಪ ಅವರ ಮನೆಗೆ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಅವರೊಂದಿಗೆ ಭೇಟಿ ನೀಡಿ ಚರ್ಚಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸೂಕ್ತ ಸ್ಥಾನಮಾನ ನೀಡುವ ಭರವಸೆಗೆ ಕೆಲವು ಸ್ಪಂದಿಸಿದ್ದಾರೆ. ಕೆಲವರು ಸಂಪರ್ಕಕ್ಕೆ ದೊರೆತಿಲ್ಲ. ಅವರನ್ನು ಸಂಪರ್ಕಿಸುವ ಪ್ರಯತ್ನ ನಡೆದಿದೆ. ಯಾರಾದರೂ ಬಂಡಾಯವಾಗಿ ಸ್ಪರ್ಧೆಯಲ್ಲಿ ಇದ್ದವರು ನಾಮಪತ್ರ ವಾಪಸು ಪಡೆಯಬೇಕು ಎಂದು ಮನವಿ ಮಾಡಿದರು.ಬಿಜೆಪಿಯವರು ಕಾಂಗ್ರೆಸ್ ಪಕ್ಷವನ್ನು ಲಿಂಗಾಯತ ವಿರೋಧಿ ಎಂದು ಬಿಂಬಿ ಸುವುದು ಖಂಡನೀಯ ಎಂದು ದೂರಿದರು.ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ದೂರಿದ್ದಾರೆ. ಅದನ್ನು ತಿರುಚಿ ಸಿದ್ದರಾಮಯ್ಯ ಅವರು ಇಡೀ ಲಿಂಗಾಯತ ಸಮಾಜವನ್ನು ಅಪಮಾನ ಮಾಡಿದ್ದಾರೆ ಎಂದು ಬಿಂಬಿಸಲಾಗು ತ್ತಿದೆಎಂದು ತಿಳಿಸಿದರು.ಸಚಿವರಾದ ಆರ್. ಅಶೋಕ್, ವಿ. ಸೋಮಣ್ಣ ಅವರನ್ನು ಹರಕೆಯ ಕುರಿ ಯನ್ನಾಗಿ ಮಾಡಲಾಗಿದೆ. ಮೇ. 10 ರ ವರೆಗೆ ಬಿಜೆಪಿ ಅಧಿಕಾರದಲ್ಲಿ ಇರಲಿದೆ. ಮೇ.13 ರಂದು ಮನೆಗೆ ಗಂಟುಮೂಟೆ ಕಟ್ಟಿಕೊಂಡು ಹೋಗುವುದು ಗ್ಯಾರಂಟಿ. ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇಂಟಕ್ ಜಿಲ್ಲಾ ಅಧ್ಯಕ್ಷ ಕೆ.ಎಂ. ಮಂಜುನಾಥ್, ಬಿ. ವಿನಾಯಕ, ಎನ್.ಎಸ್. ವೀರಭದ್ರಪ್ಪ, ಬಿ.ಎಚ್. ಉದಯ್ ಕುಮಾರ್, ಡಿ. ಶಿವಕುಮಾರ್, ರಾಕೇಶ್, ಫಾರೂಖ್, ಸುರೇಶ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.