ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಮುಂಡ್ರಿಗಿ ನಾಗರಾಜ್ ಹರ್ಷ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜೂ.8: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 9 ಅಭ್ಯರ್ಥಿಗಳು ವಿಜಯ ಸಾಧಿಸಿದ್ದು, ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ ತುಕಾರಾಂ ರವರು ಜಯಶೀಲರಾಗಿದ್ದಾರೆ. ಅದರ ಬೆನ್ನಲ್ಲೆ ಇತ್ತೀಚೆಗೆ ನಡೆದ ಈಶಾನ್ಯ ಪದವೀಧರ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಇಂದು ಹೊರಬಂದಿದ್ದು  ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಗೊಂಡಿದೆ ಎಂದು ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡ್ರಿಗಿ ನಾಗರಾಜ್ ಹರ್ಷ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಸಚಿವರು, ಶಾಸಕರ ಜೊತೆಗೆ ಎಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದ ಪರಿಣಾಮ ಹಾಗೂ ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಯೋಜನೆಗಳ ಕಾರಣದಿಂದ ಈ ಯಶಸ್ಸು ನಮ್ಮದಾಗಿದೆ. ಮುಂಬರುವ ಸಂಡೂರು ವಿಧಾನಸಭಾ ಉಪಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲಲಿದ್ದು ಬಳ್ಳಾರಿ ಕಾಂಗ್ರೆಸ್ ನ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತು ಪಡಿಸುತ್ತೇವೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ‌

One attachment • Scanned by Gmail