ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಾಸಕ ನಾಗೇಂದ್ರ ಬಿರುಸಿನ ಪ್ರಚಾರ

ಬಳ್ಳಾರಿ, ಏ.23: ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ನಗರದ 37,38,39 ನೇ ವಾರ್ಡಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದರು.
ಕಾಂಗ್ರೆಸ್ ಪಕ್ಷ ಈ ಹಿಂದೆ ಅಧಿಕಾರಕ್ಕೆ ಬಂದಾಗ ಗಡಗಿ ಚೆನ್ನಪ್ಪ ವೃತ್ತದ ಅಭಿವೃದ್ದಿ, 24 ತಾಸಿನ ಕುಡಿಯುವ ನೀರಿನ ಯೋಜನೆಯ ಅನುಷ್ಟಾನ, ಸೇರಿದಂತೆ ಹಲವು ಹತ್ತು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿದೆ. ನಗರದ ಅಭಿವೃದ್ದಿ ಜನ ಸಾಮಾನ್ಯರಿಗೆ ಹೊರೆ ಇಲ್ಲದೆ ಆಗಬೇಕೆಂದರೆ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಅದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.