ಕಾಂಗ್ರೆಸ್ ಅಭ್ಯರ್ಥಿ ಪರ ಮುನಿಯಪ್ಪ ಮತಯಾಚನೆ

ಕೋಲಾರ,ಡಿ.೬:ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ ಕೇಂದ್ರ ಸರ್ಕಾರದ ಮಾಜಿ ಸಚಿವರೂ ಹಾಗೂ ತುಮಕೂರು ಜಿಲ್ಲೆ ವಿಧಾನಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ವೀಕ್ಷಕರೂ ಆದ ಕೆ.ಹೆಚ್ ಮುನಿಯಪ್ಪ ರವರು ತುಮಕೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮತ ಯಾಚನೆ ಮಾಡಿದರು.
ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಶಾಸಕ ರಂಗನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ರು ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು, ಪಟ್ಟಣ ಪಂಚಾಯತಿ ಸದಸ್ಯರು, ನಗರಸಭೆ ಸದಸ್ಯರಲ್ಲಿ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಅಭ್ಯರ್ಥಿಗೆ ಮತ ನೀಡಿ ಜಯಶೀಲರನ್ನಾಗಿ ಮಾಡಬೇಕೆಂದು ಕೋರಿದರು.