ಕಾಂಗ್ರೆಸ್ ಅಭ್ಯರ್ಥಿ ಪರ ಮುಖಂಡರ ಪ್ರಚಾರ

ಚಳ್ಳಕೆರೆ.ನ.೨೭;  ವಿಧಾನಸಭಾ ಕ್ಷೇತ್ರದ ಶಾಸಕರಾದ  ಟಿ ರಘುಮೂರ್ತಿ ಅವರು ಇಂದು, ಚಿತ್ರದುರ್ಗ ದಾವಣಗೆರೆ ನಗರದ ಸ್ಥಳೀಯ ಸಂಸ್ಥೆ ಚುನಾವಣೆ ಸಲುವಾಗಿ ಮೊಳಕಾಲ್ಮೂರು ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು, ವಿಧಾನ ಪರಿಷತ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಬಿ ಸೋಮಶೇಖರ್ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.ಇದೇ ವೇಳೆ ಮೊಳಕಾಲ್ಮೂರು ನಗರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಪಂಚಾಯತಿ ಸದಸ್ಯರೊಂದಿಗೆ ಸಭೆ ನಡೆಸಿದ ಮಾನ್ಯ ಶಾಸಕರು ವಿವಿಧ ವಿಷಯಗಳ ಕುರಿತು ಚರ್ಚಿಸಿ, ಚುನಾವಣೆಯಲ್ಲಿ  ಬಿ ಸೋಮಶೇಖರ್ ಅವರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸಲು ಶ್ರಮವಹಿಸುವಂತೆ ಕೋರಲಾಯಿತು.ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರು ಪಕ್ಷದ  ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.