ಕಾಂಗ್ರೆಸ್ ಆಡಳಿತ ವಿರೋಧಿಸಿ ಪ್ರತಿಭಟನೆ

ರಾಮನಗರ, ಆ. ೧೨: ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಚಾರ ಹಾಗೂ ಆಡಳಿತ ವಿರೋಧಿ ಧೋರಣೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಐಜೂರು ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಹೆದ್ದಾರಿ ತಡೆದು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿರುವ ಉಪ ಮುಖ್ಯಮತ್ರಿ ಡಿ.ಕೆ.ಶಿವಕುಮಾರ್ ಹಾಗೂ ವರ್ಗಾವಣೆ ದಂಧೆಯಲ್ಲಿ ತೊಡಗಿಸಿಕೊಡಿರುವ ಕೃಷಿ ಸಚಿವ ಚಲುವರಾಯಸ್ವಾಮಿ ವಜಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್ ಗೌಡ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಕಾರಕ್ಕೆ ಬಂದ ತಕ್ಷಣ ದುರಾಡಳಿತದಲ್ಲಿ ತೊಡಗಿಸಿಕೊಂಡಿದೆ. ಎರಡು ತಿಂಗಳ ಆಡಳಿತನಕ್ಕೆ ಜನತೆ ಬೇಸತ್ತಿದ್ದಾರೆ. ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಕಳೆದ ಸರಕಾರದ ಹಲವು ಯೋಜನೆಗಳನ್ನು ತಡೆ ಹಿಡಿಯುವ ಕೆಲಸ ಮಾಡಿರುವುದು, ರೈತ ವಿರೋಧಿ ತನವನ್ನು ತೋರಿಸುತ್ತದೆ ಎಂದು ಹೇಳಿದರು. ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ರೈತರ ಅಭಿವೃದ್ಧಿಗೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಯೋಜನೆಯಡಿಯಲ್ಲಿ ಕೇಂದ್ರದ ಜತೆಗೆ, ರಾಜ್ಯ ಸರಕಾರವು ರೈತರಿಗೆ ಹಣ ನೀಡುತ್ತಿತ್ತು. ಈ ಯೋಜನೆಯನ್ನು ಸಿದ್ದರಾಮಯ್ಯ ತಡೆ ಹಿಡಿದಿದ್ದಾರೆ ಎಂದು ಹೇಳಿದರು.
ಕೃಷಿ ತೋಟಗಾರಿಕೆ ಹಾಗೂ ರೇಷ್ಮೆ ಬೆಳೆಯುವ ರೈತರಿಗೆ ಸಾಕಷ್ಟು ಅನುದಾನ ನೀಡಲಾಗುತ್ತಿತ್ತು. ಆದರೆ, ಗ್ಯಾರೆಂಟಿ ಯೋಜನೆ ಜಾರಿಗಾಗಿ ಅನುದಾನ ಕಡಿತ ಮಾಡಿದ್ದು, ಯೋಜನೆಗಳನ್ನೇ ಕೈ ಬಿಟ್ಟದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೃಷಿ ಸಚಿವ ಚಲುವರಾಯ ಸ್ವಾಮಿ
ರಾಜ್ಯದಲ್ಲಿನ ರೈತರ ಆತ್ಮಹತ್ಯೆಯ ಕುರಿತು ಕೇವಲವಾಗಿ ಮಾತನಾಡಿದ್ದಾರೆ. ಗುತ್ತಿಗೆದಾರರು ಉಪಮುಖ್ಯಮಂತ್ರಿ ಡಿ,ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ಮೋರ್ಚಾದ ಉಪಾಧ್ಯಕ್ಷ ಲೋಕೇಶ್ ಮಾತನಾಡಿ, ಭೂಸಿರಿ ಯೋಜನೆ, ಗೋ ಶಾಲೆ, ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಯೋಜನೆ ಸೇರಿದಂತೆ ರೈತರಿಗೆ ಅನುಕೂಲ ಕಲ್ಪಿಸುವ ಹಲವು ಯೋಜನೆಗಳನ್ನು ಕಾಂಗ್ರೆಸ್ ಸರಕಾರ ತಡೆ ಹಿಡಿದಿದೆ. ಆ ಮೂಲಕ ರೈತರಿಗೆ ಅನಾನೂಕುಲ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು,ಮುಖಂಡರಾದ ರೇಣುಕಯ್ಯ, ರುದ್ರದೇವರು, ಪದ್ಮನಾಭ್, ಗೋಪಿ, ಚಂದನ್ ಮೋರೆ, ನಾಗೇಶ್ ಇದ್ದರು.