ಕಾಂಗ್ರೆಸ್ ಕಚೇರಿಯಲ್ಲಿ ಅಂಬಿಗರ ಚೌಡಯ್ಯನವರ 904ನೇ ಜಯಂತಿ ಆಚರಣೆ

ಸೇಡಂ,ಜ,21: ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿಂದು ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ 904ನೇ ಜಯಂತೋತ್ಸವ ಅಂಗವಾಗಿ ಮಾಜಿ ತೋಟಗಾರಿಕೆ ಮಹಾಮಂಡಳಿಯ ರಾಜ್ಯಾಧ್ಯಕ್ಷರಾದ ಬಸವರಾಜ ಆರ್ ಪಾಟೀಲ್ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಈ ವೇಳೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಶರಣ ರೆಡ್ಡಿ ಪಾಟೀಲ್, ಕೋಲಿ ಕಬ್ಬಲಿಗ ತಾಲೂಕ ಅಧ್ಯಕ್ಷರಾದ ನಾಗೇಂದ್ರಪ್ಪ ಲಿಂಗನಪ್ಪಲಿ, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಭೀಮಶಂಕರ್ ಕೊಳ್ಳಿ, ರುದ್ರಪಿಲ್ಲಿ, ಸಂತೋಷ್ ತಳವಾರ್, ಬಸಯ್ಯಸ್ವಾಮಿ ಸೇರಿದಂತೆ ಅನೇಕರು ಇದ್ದರು