ಕಾಂಗ್ರೆಸ್ ಕಚೇರಿಯಲ್ಲಿ ಬಾಬು ಜಗಜೀವನರಾಮ್ ಜನ್ಮದಿನ

ಕಲಬುರಗಿ,ಏ.03:ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಏಪ್ರಿಲ್ 5ರಂದು ಬೆಳಿಗ್ಗೆ 10 ಗಂಟೆಗೆ ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಮ್ ಅವರ ಜನ್ಮದಿನವನ್ನು ಆಚರಣೆ ಮಾಡಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಅವರು ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಲ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು, ಹಿರಿಯರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅವರು ಹೇಳಿಕೆಯಲ್ಲಿ ಕೋರಿದ್ದಾರೆ.