ಕಾಂಗ್ರೆಸ್ ಕಾರ್ಯಕರ್ತರಿಂದ ಗೂಂಡಾಗಿರಿ:ಅಪ್ಪುಗೌಡ

ಕಲಬುರಗಿ,ಮೇ 9: ಗುಲ್ಬರ್ಗ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ್ ತಮ್ಮ ಬೆಂಬಲಿಗರ ಸಹಾಯದೊಂದಿಗೆ ಗೂಂಡಾ ಪ್ರವೃತ್ತಿ ತೋರುತ್ತಿದ್ದು, ಸೋಮವಾರ ರಾತ್ರಿ ವೀರಶೈವ ಲಿಂಗಾಯತ ಮುಖಂಡ ಶಿವಾನಂದ ಹುಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹಾಲಿ ಶಾಸಕ ಮತ್ತು ಬಿಜೆಪಿ ಅಭ್ಯರ್ಥಿ ದತ್ತಾತ್ರೇಯ ಸಿ.ಪಾಟೀಲ್ ರೇವೂರ್ ಗಂಭೀರ ಆರೋಪ ಮಾಡಿದರು.
ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸೋಮವಾರ ರಾತ್ರಿ ಸಂಗಮೇಶ್ವರ ನಗರ ಬಡಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಸುಳ್ಳು ಆರೋಪ ಸಾಬೀತು ಮಾಡುವ ಪ್ರಯತ್ನವಾಗಿ ತಮ್ಮ ಬೆಂಬಲಿಗ ಹಾಗೂ ಬಿಜೆಪಿ ಮುಖಂಡ ಹುಲಿ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಈ ಹಿಂದೆಯೂ ಅವರ ಮೇಲೆ ಎರಡು ಮೂರು ಬಾರಿ ಹಲ್ಲೆ ನಡೆಸುವ ಯತ್ನವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಿದ್ದಾರೆ. ಈ ಕೃತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ್ ನೇರ ಕುಮ್ಮಕ್ಕಿದೆ ಎಂದರು.ಬಿಜೆಪಿ ಮುಖಂಡ ಅರುಣಕುಮಾರ್ ಪಾಟೀಲ್ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


ಧ್ವನಿ ಮುದ್ರಿಕೆ ಬಿಡುಗಡೆ
ಕಾಂಗ್ರೆಸ್ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ್ ಅವರು ತಮ್ಮ ಬೆಂಬಲಿಗರ ಮೂಲಕ ಬಿಜೆಪಿ ಕಾರ್ಯಕರ್ತರ ಮೇಲೆ ಗೂಂಡಾಗಿರಿ ನಡೆಸುತ್ತಿದ್ದಾರೆ ಎಂಬುದಕ್ಕೆ ಅಧಿಕೃತ ಪುರಾವೆ ಇದೆ ಎಂದು ಶಾಸಕ ರೇವೂರ್ ಟೀಕಿಸಿದರು.ಇದೇವೇಳೆ ಅವರು ಬಿಜೆಪಿ ಕಾರ್ಯಕರ್ತರೊಬ್ಬರಿಗೆ ಕೆಲವು ಕಾಂಗ್ರೆಸ್ ಮುಖಂಡರು ಫೆÇೀನ್ ಮೂಲಕ ಬೆದರಿಕೆ ಹಾಕಿದ್ದಾರೆ ಎನ್ನಲಾದ ಧ್ವನಿಮುದ್ರಿಕೆಯೊಂದನ್ನು ಶಾಸಕ ರೇವೂರ್ ಸುದ್ದಿಗೋಷ್ಠಿಯಲ್ಲಿ ಬಿಡುಗಡೆಗೊಳಿಸಿದರು.