ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ


ಲಕ್ಷ್ಮೇಶ್ವರ,ಮೇ21: ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಶನಿವಾರ ಕರ್ನಾಟಕದ ಮುಖ್ಯಮಂತ್ರಿ ಯಾಗಿ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಅವರ ಭಾವಚಿತ್ರದೊಂದಿಗೆ ಸಂಭ್ರಮಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ರಾಜು ಓಲೆಕಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೋಡೆತ್ತಿನ ಸರ್ಕಾರ ರಾಜ್ಯದ ಬಡವರ ದೀನದಲಿತರ ಅಲ್ಪಸಂಖ್ಯಾತರ ಮತ್ತು ಎಲ್ಲ ವರ್ಗದ ಜನರ ಹಿತಕ್ಕಾಗಿ ಕಲ್ಯಾಣಕ್ಕಾಗಿ ಶ್ರಮಿಸಲಿದೆ ಎಂದರು.
ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಪ್ಪಣ್ಣ ನೋವಿ ನೂಲ್ಪಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶಿವಣ್ಣ ಕುರಿ ಸದಸ್ಯರಾದ ಲಕ್ಷ್ಮಣ್ ಅತಡಕರ ಮಲ್ಲೇಶ್ ಕುರಿ ಮಂಜು ಶಂಬೋಜಿ ಈರಣ್ಣ ತನ ಕುಂಟೆ ಮಂಜುಗಡ್ಡೆ ನವರ ಮಂಜು ಗೋಂದಕರ ದೇವಣ್ಣ ವಾಲೀಕಾರ ಮಂಜು ಯಲವಗಿ ನೂರ ಹಮ್ಮದ್ ಕುದುರೆಮನಿ ಸೇರಿದಂತೆ ಅನೇಕರಿದ್ದರು.
ಲಕ್ಷ್ಮೇಶ್ವರ ಪಟ್ಟಣದ ಮ್ಯಾಗೇರಿ ಓಣಿಯಲ್ಲಿ ವಿಜಿ ಪಡಿಗೇರಿ ಅವರ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು ಸಿಹಿ ಹಂಚಿ ಪಟಾಕಿಸಿಡಿಸಿ ಸಂಭ್ರಮಿಸಿದರು.