ಕಾಂಗ್ರೆಸ್ ಕಾರ್‍ಯಕರ್ತರ ಸಭೆ

ಕೆ.ಆರ್.ಪುರ, ಮೇ.೨೬- ಕೆ.ಆರ್.ಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿನ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಂಡು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಸಾಧಿಸಲಿದೆ ಎಂದು ಪರಾಜಿತ ಅಭ್ಯರ್ಥಿ ಹಾಗೂ ಕೆ.ಪಿ.ಸಿ.ಸಿ.ಕಾರ್ಯದರ್ಶಿ ಡಿ.ಕೆ.ಮೋಹನ್ ಅವರು ತಿಳಿಸಿದರು.
ಕೆ.ಆರ್.ಪುರದ ಖಾಸಗಿ ಹೊಟೇಲ್ ನಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಕೆಲವೊಂದು ಅಭ್ಯರ್ಥಿಗಳ ಆಗಮನ ಸಂಬಂಧಿಸಿದಂತೆ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವಪುಟಿದೇಳಲಿದೆ ಎಂದು ನುಡಿದರು.
ಕಾಂಗ್ರೆಸ್ ಪಕ್ಷಕ್ಕೆ ಕೆ.ಆರ್.ಪುರ ಕ್ಷೇತ್ರ ಹಾಗೂ ರಾಜ್ಯದಲ್ಲಿ ಅಭೂತಪೂರ್ವವಾದ ಬೆಂಬಲ ದೊರೆತಿದ್ದು, ಕಾಂಗ್ರೆಸ್ ಸರ್ಕಾರ
ಕಾಂಗ್ರೆಸ್ ಪಕ್ಷ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುವ ಮೂಲಕ ಅತ್ಯುತ್ತಮ ಆಡಳಿತ ನೀಡಲಿದೆ ಎಂದು ವಿವರಿಸಿದರು.
ಕೆ.ಆರ್.ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ದೊರೆತಿರುವುದು ಸಂತಸ ತಂದಿದೆ,ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು ಒಗ್ಗಟ್ಟಿನಲ್ಲಿ ಮುಂದುವರೆಯುತ್ತೆವೆ ಎಂದು ನುಡಿದರು.
ಕಾಂಗ್ರೆಸ್ ಅಭ್ಯರ್ಥಿಯಾದ ನನಗೆ ಅತ್ಯುತ್ತಮ ಬೆಂಬಲ ನೀಡಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಚಿರಖುಣಿ ಎಂದು ಹೇಳಿದರು.
ಮಾಜಿ ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರು ಕಾರ್ಯಕರ್ತರ ಬೆನ್ನೆಲುಬಾಗಿ ನಿಲ್ಲುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತೆವೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ,ಕೆಪಿಸಿಸಿ ಸದಸ್ಯ ನಾರಾಯಣಸ್ವಾಮಿ, ಹಿರಿಯ ಮುಖಂಡ ಡಿ.ಎ.ಗೋಪಾಲ್ ,ಬ್ಲಾಕ್ ಕಾಂಗ್ರೆಸ್ ವೆಂಕಟೇಶ್, ಮಹಿಳಾ ಅಧ್ಯಕ್ಷೆ ಸಾಕಮ್ಮ,ಮುಖಂಡರಾದ ಅಗರ ಪ್ರಕಾಶ್,ಪ್ರಸನ್ನ,ಗಗನ್, ಪ್ರವೀಣ್ ಗೌಡ, ಜಾನ್ ಬಾಸ್ಕೋ ಇದ್ದರು.