ಕಾಂಗ್ರೆಸ್ ಕಾರ್ಯದರ್ಶಿಗೆ ಅಭಿನಂದನೆ

ಮಾಲೂರು, ಮಾ. ೨೯-ತಾಲೂಕಿನ ತೊರ್‍ನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಲಾಭೀವೃದ್ಧಿ ಸಮಿತಿ ಹಾಗೂ ಶಿಕ್ಷಕ ಸಿಬ್ಬಂದಿ ವತಿಯಿಂದ ಗ್ರಾ.ಪಂ. ಅಧ್ಯಕ್ಷ ಮುನಿಯಪ್ಪ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಬೆಳ್ಳಾವಿ ಲೋಕೇಶ್ ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ಮುನಿಯಪ್ಪ ಇಲ್ಲಿನ ಹಿರಿಯ ಪ್ರಾಥಮಿಕ ಶಾಲೆಯು ಸುಮಾರು ೭೦ ವರ್ಷಗಳಿಂದ ಉತ್ತಮ ರೀತಿಯ ಶಿಕ್ಷಣವನ್ನು ನೀಡುತ್ತಿದೆ. ಅದೇ ರೀತಿ ಮುಂದಿನ ದಿನಗಳಲ್ಲಿಯೂ ಗುಣಮಟ್ಟದ ಶಿಕ್ಷಣಕ್ಕಾಗಿ ಗ್ರಾ.ಪಂ. ವತಿಯಿಂದ ಶಾಲೆಯಲ್ಲಿ ಅಗತ್ಯವಿರುವ ಮೂಲಭೂತ ಸವಲತ್ತುಗಳನ್ನು ಒದಗಿಸಲಾಗುವುದು. ಶಾಲಾ ಕೊಠಡಿಗಳ ದುರಸ್ತಿ, ಕಾಂಪೌಂಡ್ ನಿರ್ಮಾಣವನ್ನು ಸಹ ಮಾಡಿಕೊಡಲಾಗುವುದು ತೊರ್‍ನಹಳ್ಳಿ ಗ್ರಾಮದ ಸುತ್ತ ಮುತ್ತಲಿನ ಗ್ರಾಮಸ್ಥರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ ಸರಕಾರಿ ಶಾಲೆಗಳನ್ನು ಉಳಿಸುವ ಕೆಲಸ ಮಾಡುವಂತೆ ತಿಳಿಸಿದರು.
ಪ್ರಾ.ಶಾ.ಶಿ.ಸಂ.ಅಧ್ಯಕ್ಷ ಆರ್.ನರಸಿಂಹ ಮಾತನಾಡಿ ತೊರ್‍ನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉತ್ತಮ ರೀತಿಯಲ್ಲಿ ಶಾಲಾ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಅದೇ ರೀತಿ ಇಲ್ಲಿನ ಶಾಲಾಭಿವೃದ್ಧಿ ಸಮಿತಿಯು ಸಹ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕಾಗಿ ಉತ್ತಮ ರೀತಿಯ ಸಹಕಾರವನ್ನು ನೀಡುತ್ತಿದ್ದಾರೆ. ಶಾಲೆಗೆ ಅಗತ್ಯವಿರುವ ಮೂಲಭೂತ ಸವಲತ್ತುಗಳನ್ನು ಒದಗಿಸುವುದಾಗಿ ಗ್ರಾ.ಪಂ. ಅಧ್ಯಕ್ಷ ಭರವಸೆ ನೀಡಿದ್ದಾರೆ. ಕನ್ನಡ ಸರಕಾರಿ ಶಾಲೆಗಳಿಗೆ ಪೋಷಕರು ತಮ್ಮ ಮಕ್ಕಳನ್ನು ದಾಖಲಿಸಿ ಸರಕಾರಿ ಶಾಲೆಗಳ ಉಳಿವಿಗಾಗಿ ಸಹಕರಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮಾಂಜನೇಯ, ಎಂ.ಸಿ.ಹಳ್ಳಿ ಕ್ಲಸ್ಟರ್‌ನ ಸಿಆರ್.ಪಿ ವೆಂಕಟೇಶ್, ಮುಖ್ಯಶಿಕ್ಷಕಿ ರಾಜೇಶ್ವರಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಮುನಿಶಾಮಪ್ಪ, ಸದಸ್ಯರಾದ ಸಿ.ವಿ ವೆಂಕಟರೋಣಪ್ಪ, ನಾಗರಾಜ್, ಮುಖಂಡರಾದ ಚಿಕ್ಕಣ್ಣ, ಪೂರಿ ಮಂಜುನಾಥ್, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕರಾ ಮುನಿರಾಜು, ಟಿ.ಎಂ.ವೆಂಕಟೇಶ್, ಭಾಗ್ಯವತಿ, ಕಾವ್ಯಶ್ರೀ, ಹಾಜರಿದ್ದರು.