ಕಾಂಗ್ರೆಸ್ ಕಾರ್ಯಾಲಯದಲ್ಲಿ ಪಂಡಿತ ನೆಹರು ಜಯಂತೋತ್ಸವ

ಸೇಡಂ, ನ,14: ಪಟ್ಟಣದ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ದೇಶದ ಮೊದಲ ಪ್ರಧಾನಿ, ದಿ. ಪಂಡಿತ್ ಜವಾಹರ್ ಲಾಲ್ ನೆಹರು (ಮಕ್ಕಳ ದಿನಾಚರಣೆಯ )ಅವರ ಜಯಂತೋತ್ಸವ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.