ಕಾಂಗ್ರೆಸ್ ಗೆಲುವಿಗೆ ನಲ್ಲೂರಳ್ಳಿ ಮನವಿ

ಕೆ.ಆರ್.ಪುರ, ಮಾ.೨೬-ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಮಹದೇವಪುರ ಕ್ಷೇತ್ರದಲ್ಲಿ ಮುನ್ನಡೆ ನೀಡುವ ಕಾರ್ಯವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಲ್ಲೂರಹಳ್ಳಿ ನಾಗೇಶ್ ಅವರು ತಿಳಿಸಿದರು.
ಮಹದೇವಪುರ ಕ್ಷೇತ್ರದ ಮಾರತ್ತಹಳ್ಳಿ,ಬಿದರಹಳ್ಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ನಿಷ್ಠಾವಂತ ಕಾರ್ಯಕರ್ತರು ಪಕ್ಷದ ಬೆನ್ನೆಲುಬಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪತ್ತೆ ಪುಟಿದೇಳಲಿದೆ ಎಂದು ನುಡಿದರು.
ಮಹದೇವಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ತಮ್ಮದೆ ಆದ ನೆಲೆಹೊಂದಿದ್ದು,ಮುಂದಿನ ದಿನಗಳಲ್ಲಿ ಪಾರಮ್ಯ ಮತ್ತೆ ಸ್ಥಾಪಿಸಲಿದೆ ಎಂದು ನುಡಿದರು.
ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲೀ ಖಾನ್ ಅವರು ಮಾತನಾಡಿ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ಹಲವು ಸಭೆಗಳನ್ನು ನಡೆಸಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ನುಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ನಾಗೇಶ್, ಮಾಜಿ ಪಾಲಿಕೆ ಸದಸ್ಯ ಉದಯ್ ಕುಮಾರ್, ಕೆಪಿಸಿಸಿ ಸದಸ್ಯ ಜಯರಾಮರೆಡ್ಡಿ,ಮುಖಂಡರಾದ ಎಂಸಿಸಿ ರವಿ,ಗೊವಿಂದರಾಜು,ದೀಪಕ್ ರಾಜ್ ಇದ್ದರು.