ಕಾಂಗ್ರೆಸ್ ಗೆಲುವಿನ ಸಂಭ್ರಮದಲ್ಲಿಪಾಕ್ ಜಿಂದಾಬಾದ್ ಘೋಷಣೆ

ಬೆಂಗಳೂರು,ಮೇ.13-ವಿಧಾನಸಭಾ ಚುನಾವಣೆಯ ಭರ್ಜರಿ ಗೆಲುವನ್ನು ಬೀದಿ ಬೀದಿಗಳಲ್ಲಿ ಕಾಂಗ್ರೆಸ್ ಬೆಂಬಲಿಗರು, ಕಾರ್ಯಕರ್ತರು ಸಂಭ್ರಮ ಆಚರಿಸುತ್ತಿರುವ ಮಧ್ಯೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದೆ. ಈ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಬೆಂಬಲಿಗರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗೆಲುವು ಸಂಭ್ರಮಿಸಿ, ಆದರೆ ಈ ರೀತಿಯ ಭಾರತ ವಿರೋಧಿ ಘೋಷಣೆಗಳು ಬೇಡ. ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಲವು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.
ಬೆಳಗಾವಿ ಹಾಗೂ ಭಟ್ಕಳದಲ್ಲಿ ಕಾಂಗ್ರೆಸ್ ಬೆಂಬಲಿಗರ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದೆ. ಭಾರಿ ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಬೆಳಗಾವಿಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಬೆಂಬಲಿಗರು ಕಾಂಗ್ರೆಸ್ ಗೆಲುವು ಸಂಭ್ರಮಿಸಿದ್ದಾರೆ. ಬಣ್ಣ ಎರಚಿ ಒಕುಳಿಯಾಡಿದ್ದಾರೆ. ಇದೇ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಲಾಗಿದೆ. ಈ ವೇಳೆ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸರು ಖಡಕ್ ಎಚ್ಚರಿಕೆ ನೀಡಿ ಎಲ್ಲರ ಬಾಯಿ ಮುಚ್ಚಿಸಿದ್ದಾರೆ.
ನಿಮ್ಮ ನಾಯಕನ ಪರ, ಪಕ್ಷದ ಪರ ಘೋಷಣೆ ಕೂಗಿ, ಇಲ್ಲಿ ಅನಗತ್ಯ ಘೋಷಣೆ ಬೇಕಿಲ್ಲ ಎಂದು ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರ ಎಚ್ಚರಿಕೆ ಬಳಿಕ ಕಾರ್ಯಕರ್ತರು ವಿವಾದಿತ ಘೋಷಣೆ ಕೂಗುವುದು ನಿಲ್ಲಿಸಿದ್ದಾರೆ. ಕಾಂಗ್ರೆಸ್ ಗೆಲುವಿನ ಬೆನ್ನಲ್ಲೇ ಈ ಘಟನೆ ನಡೆದಿರುವುದು ಇದೀಗ ಹೊಸ ಆತಂತಕ್ಕೆ ಕಾರಣವಾಗಿದೆ.
ಬೆಳಗಾವಿಯಲ್ಲಿ ಮಾತ್ರವಲ್ಲ ಭಟ್ಕಳದಲ್ಲೂ ಆತಂಕದ ಘಟನೆ ನಡೆದಿದೆ. ಭಟ್ಕಳ್‌ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳ್ ವೈದ್ಯ ಗೆಲುವು ಸಾಧಿಸುತ್ತಿದ್ದಂತೆ ಭಟ್ಕಳ್ ಸಂಶುದ್ದೀನ್ ಸರ್ಕಲ್ ಬಳಿ ಜಮಾಯಿಸಿದ ಕಾಂಗ್ರೆಸ್ ಬೆಂಬಲಿಗರು ಇಸ್ಲಾಮಿಕ್ ಬಾವುಟ ಹಾರಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಇದರ ವಿರುದ್ಧವೂ ಆಕ್ರೋಶ ವ್ಯಕ್ತವಾಗುತ್ತಿದೆ. ಈ ವಿಡಿಯೋ ಕೂಡ ವೈರಲ್ ಆಗಿದೆ. ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಪಾಕ್ ಜಿಂದಾಬಾದ್ ಘೋಷಣೆ ಮೊಳಗಿದೆ. ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಕತೆ ಏನು? ಎಂದು ಹಲವರು ಘಟನೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.