ಕಾಂಗ್ರೆಸ್ ಗೆಲ್ಲಿಸಿ

(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಮೇ೭:ರಾಜ್ಯದ ೧೪ ಕ್ಷೇತ್ರಗಳಲ್ಲಿ ೨ನೇ ಹಂತದ ಮತದಾನ ನಡೆದಿರುವಾಗಲೇ ಗ್ಯಾರಂಟಿ ನೀಡುವ ಕೈ ಗೆ ಮತ ನೀಡಿ ಗೆಲ್ಲಿಸಿ ಎಂದು ರಾಜ್ಯಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾu ಎಕ್ಸ್‌ನಲ್ಲಿ ಟ್ವೀಟ್‌ಮಾಡಿರುವ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟ ಭರವಸೆ ಈಡೇರಿಸಿ ಗ್ಯಾರಂಟಿ ಯೋಜನೆಗಳನ್ನು ಮನೆಮನೆಗಳಿಗೆ ತಲುಪಿಸಿ ಜನಸಾಮಾನ್ಯರು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ. ಇದೀಗ ನಿಮ್ಮ ಜೀವನಮಟ್ಟದ ಮತ್ತಷ್ಟು ಸುಧಾರಣೆಗಾಗಿ ಹಾಗೂ ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ರಾಷ್ಟ್ರೀಯ ಕಾಂಗ್ರೆಸ್ ಸಹ ೫ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ನಮ್ಮದು ನುಡಿದಂತೆ ನಡೆಯುವ ಪಕ್ಷ,ಅದನ್ನೂ ಈಗಾಗಲೇ ಸಾಬೀತುಪಡಿಸಿದ್ದೇವೆ ನಿಮ್ಮ ನೆಮ್ಮದಿಯ ನಾಳೆಗಳಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಆರ್ಶೀವದಿಸಿ ಎಂದು ಸುರ್ಜೇವಾಲಾ ಹೇಳಿದ್ದಾರೆ.
ಒಂದು ಮತ ೧೦ ಗ್ಯಾರಂಟಿ ಎಂಬ ಆಶ್‌ಟ್ಯಾಗ್ ಬಳಸಿರುವ ಅವರು, ಪೋಸ್ಟ್‌ನಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.