ಕಾಂಗ್ರೆಸ್ ಗ್ಯಾರಂಟಿಗಳ ವೈಫಲ್ಯತೆ, ಬಿಜೆಪಿ ಮೇಲೆ ಆರೋಪ

ಕೋಲಾರ,ಜೂ,೧೫-ವಿದ್ಯುತ್ ಬಿಲ್ ಹೆಚ್ಚಳ ಮಾಡಿರುವುದು ಬಿಜೆಪಿ ಸರ್ಕಾರವಲ್ಲ, ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿಗಳಲ್ಲಿ ವಿದ್ಯುತ್ ಉಚಿತವು ಒಂದು ಗ್ಯಾರಂಟಿಯಾಗಿದೆ, ಉಚಿತವಾಗಿ ವಿದ್ಯುತ್ ನೀಡುವ ಮೊದಲೆ ವಿದ್ಯುತ್ ದರ ಹೆಚ್ಚಳ ಮಾಡಿ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಸಂಸದ ಎಸ್.ಮುನಿಸ್ವಾಮಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ಧಿಗಾರರೊಂದಿಗೆ ಅವರು ಮಾತನಾಡಿ, ಪ್ರತಿ ಯೂನಿಟ್ ವಿದ್ಯುತ್‌ಗೆ ೭೦ ಪೈಸೆ ಹೆಚ್ಚಳ ಮಾಡಿರುವುದು ಕಾಂಗ್ರೆಸ್ ಸರ್ಕಾರ, ಇದರ ಜೊತೆಗೆ ಕೈಗಾರಿಕಾ ವಲಯದ ವಿದ್ಯುತ್ ದರವನ್ನು ಹೆಚ್ಚಳ ಮಾಡಿ ರಾಜ್ಯ ಕೈಗಾರಿಕಾ ವಲಯದ ಬೆನ್ನು ಮೂಳೆ ಮುರಿದಿದೆ, ಇದರಿಂದ ಮುಂದಿನ ದಿನಗಳಲ್ಲಿ ರಾಜ್ಯದ ಯುವಕರು ಉದ್ಯೋಗ ಕಳೆದುಕೊಳ್ಳುವ ಸ್ಥಿತಿಗೆ ಕಾಂಗ್ರೆಸ್ ಪಕ್ಷ ಇದೀಗ ಅಡಿಪಾಯ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಈ ಇಬ್ಬರೂ ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ ಎಂದು ಕಾಲೆಳೆಯುವ ಕೆಲಸಗಳನ್ನು ಮಾಡುತ್ತಿದ್ದಾರೆ, ಐದು ಗ್ಯಾರಂಟಿಗಳನ್ನು ಈಡೇರಿಸುವ ಒಳಗಾಗಿ ಇವರಿಬ್ಬರ ಜಗಳ ಬೀದಿಗೆ ಬರುತ್ತದೆ. ನರೇಂದ್ರ ಮೋದಿ ಅವರ ೯ ವರ್ಷಗಳ ಸಾಧನೆ ಮುಂದಿಟ್ಟುಕೊಂಡು ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಉಚಿತ ಯೋಜನೆಗಳನ್ನು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗದೆ ಬಿಜೆಪಿ ಸರ್ಕಾರ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದರು.
ಇವರು ಸಭೆ ಮಾಡುವುದಾದರೆ ಪ್ರತ್ಯೇಕವಾಗಿ ಸಭೆ ಮಾಡಬೆಕಾಗಿತ್ತು, ಪಕ್ಷದ ಸಭೆಗೆ ಅದಿಕಾರಿಗಳನ್ನು ಸೇರಿಸಿಕೊಂಡಿದ್ದು ಯಾಕೆ? ಸುರ್ಜೇವಾಲಾರನ್ನು ಕರೆದು ಬೆಂಗಳೂರಿನಿಂದ ಎಷ್ಟು ಹಣ ಕ್ರೋಡೀಕರಿಸಲು ಸಾದ್ಯವಾಗುತ್ತದೆ, ಯಾವ್ಯಾವ ಇಲಾಖೆಯಿಂದ ಎಷ್ಟು ಹಣ ಬರಲಿದೆ ಎಂಬ ಲೆಕ್ಕಾಚಾರ ಹಾಕುವ ಕೆಲಸ ಮಾಡಿ ಕಾಂಗ್ರೆಸ್ ಪಕ್ಷದವರು ಅಧಿಕಾರ ದುರುಪಯೋಗಪಡಿಸಿಕೊಳ್ಳುವ ಮೂಲಕ ಪ್ರಜಾ ಪ್ರಭುತ್ವವನ್ನು ಕಗ್ಗೂಲೆ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಇದಲ್ಲದೆ ಗೃಹಿಣಿಯರಿಗೆ ನೀಡುವ ೨ ಸಾವಿರ ರೂ.ಗಳಿಗೂ ನಿಬಂಧನೆಗಳನ್ನು ಹಾಕುವ ಮೂಲಕ ಜನರನ್ನು ಯಾಮಾರಿಸುವ ಕೆಲಸ ಮಾಡುತ್ತಿದ್ದಾರೆ, ಕಾಂಗ್ರೆಸ್‌ನವರ ಟೋಪಿ ಕೆಲಸ ಕೆಲವೇ ದಿನಗಳಲ್ಲಿ ಹೊರ ಬೀಳಲಿದೆ ಎಂದು ಅಸಮಾಧಾನ ವ್ಯಕ್ತ ಪಡೆಸಿದರು,
ಜಿಲ್ಲಾಧ್ಯಕ್ಷ ಡಾ.ವೇಣುಗೊಪಾಲ್, ಮುಖಂಡರಾದ ಕೆಂಬೋಡಿ ನಾರಾಯಣಸ್ವಾಮಿ, ಮಮತಮ್ಮ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಾಲಾಜಿ ಇದ್ದರು.