ಕಾಂಗ್ರೆಸ್ ತುಷ್ಠೀಕರಣ ರಾಜಕಾರಣದಿಂದ ದುಷ್ಟ ಶಕ್ತಿಗಳಿಗೆ ಕುಮ್ಮಕ್ಕು

ಬೀದರ್: ಮಾ.6:ಕಾಂಗ್ರೆಸ್ ಪಕ್ಷ ತುಷ್ಠೀಕರಣ ರಾಜಕಾರಣದಲ್ಲಿ ತೊಡಗಿರುವುದರಿಂದ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಉತ್ತಮ ಸಮಾಜಕ್ಕೆ ಧಕ್ಕೆ ತರುವ ರೀತಿಯಲ್ಲಿ ದಿನಕ್ಕೊಂದು ಕೀಳುಮಟ್ಟದ ಹೇಳಿಕೆ ನೀಡುತ್ತಿದ್ದರಿಂದ ಸಮಾಜಘಾತುಕ ಶಕ್ತಿಗಳು, ದುಷ್ಟ ಶಕ್ತಿಗಳು, ದೇಶ ವಿರೋಧಿ ಶಕ್ತಿಗಳು ರಾಜ್ಯದಲ್ಲಿ ತಲೆ ಎತ್ತುತ್ತಿವೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಹೃದಯದಂತಿರುವ ವಿಧಾನಸೌಧದಲ್ಲೇ ಪಾಕಿಸ್ತಾನ ಪರವಾಗಿ ಘೋಷಣೆ ಮೊಳಗಿದ್ದವು. ವಿಧಿ ವಿಜ್ಞಾನ ಪ್ರಯೋಗಾಲಯ ( ಎಫ್‍ಎಸ್‍ಎಲ್) ವರದಿ ಬರುವ ಮುನ್ನವೇ ಕೆಲ ಸಚಿವರು, ಕಾಂಗ್ರೆಸ್ ಮುಖಂಡರು ಇದು ಸುಳ್ಳು ಎಂದು ಹೇಳಿಕೆ ನೀಡಿದ್ದರು. ಆದರೆ ಎಫ್‍ಎಸ್‍ಎಲ್ ವರದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜ ಎಂದು ಸಾಬೀತಾಗಿದೆ. ಮೂವರಿಗೆ ಈ ಸಂಬಂಧ ಪೆÇಲೀಸರು ಬಂಧಿಸಿದ್ದಾರೆ. ಮುಂದಿನ ವಿಚಾರಣೆ ಸಹ ನಡೆದಿದೆ. ಪಾಕ್ ಪರ ನಿಂತ ದೇಶದ್ರೋಹಿಗಳನ್ನು ಸಮರ್ಥನೆ ಮಾಡಿಕೊಂಡ ಸಚಿವರು, ಕಾಂಗ್ರೆಸ್ ಮುಖಂಡರು ಈಗೆಲ್ಲಿದ್ದಿರಿ? ನಿಮ್ಮ ಮನಸ್ಥಿತಿ ಎಂತಹ ಕೀಳುಮಟ್ಟದ್ದು ಎಂಬುದು ಸಮಾಜಕ್ಕೆ ತೋರಿಸಿಕೊಟ್ಟಿದೆ. ಈ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ಗೆ ವಹಿಸಿಬೇಕು ಎಂದು ಒತ್ತಾಯಿಸಿದ್ದಾರೆ.

ಪಾಕ್ ಪರ ಘೋಷಣೆ ಕೂಗಿದ್ದು ವಿಡಿಯೋದಲ್ಲೇ ಸ್ಪಷ್ಟವಾಗಿ ಕೇಳಿದೆ. ಇದರ ವಿರುದ್ಧ ಪಕ್ಷ ದೇಶ ವಿರೋಧಿಗಳ ವಿರುದ್ಧ ಕಠಿಣ ಕ್ರಮಕ್ಕಾಗಿ ಬಿಜೆಪಿ ಹೋರಾಟ ನಡೆಸಿದೆ. ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಸದನದಲ್ಲಿ ಸತತ ಹೋರಾಟ ಮಾಡಿದರೆ, ಪಕ್ಷ ರಾಜ್ಯಾದ್ಯಂತ ಪ್ರತಿಭಟನೆ ಮಾಡಿ ಇದರ ವಿರುದ್ಧ ಧ್ವನಿ ಎತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರ ತುಷ್ಠೀಕರಣದ ವ್ಯಾಮೋಹದಲ್ಲಿ ಮುಳುಗಿ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ ಅದಕ್ಕೆ ಸಮರ್ಥನೆ ಮಾಡಿಕೊಂಡಿರುವುದು ನಾಚಿಕೆಗೇಡಿನ ಸಂಗತಿ. ಇಂತಹ ಪ್ರಕರಣ ಸಹ ಗಂಭೀರವಾಗಿ ಪರಿಗಣಿಸದಿದ್ದರಿಂದ ದೇಶ ವಿರೋಧಿಗಳಿಗೆ ಶಕ್ತಿ ನೀಡಿದಂತಾಗಿದೆ. ಮತ ಓಲೈಕೆ ಹಾಗೂ ಅಧಿಕಾರ ದಾಹಕ್ಕಾಗಿ ದೇಶದ ವಿರುದ್ಧ ಹೆಜ್ಜೆ ಇಟ್ಟ ಕಾಂಗ್ರೆಸ್‍ಗೆ ಜನತೆ ತಕ್ಕ ಪಾಠ ಕಲಿಸುವುದು ಗ್ಯಾರಂಟಿ ಎಂದು ಹೇಳಿದ್ದಾರೆ.

ಪಾಕ್ ಪರ ಘೋಷಣೆ ಮೊಳಗಿದ ಪ್ರಕರಣ ಜರುಗಿದ ಕೆಲವೇ ದಿನಗಳಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿದೆ. ಸಮಾಜಘಾತುಕ, ದೇಶವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲಾಗಿ ಇದನ್ನು ಲಘುವಾಗಿ ಪರಿಗಣಿಸಿದ್ದರಿಂದಲೇ ಈ ತರಹದ ಕೃತ್ಯಗಳು ರಾಜ್ಯದಲ್ಲಿ ಆರಂಭವಾಗಿವೆ. ಕಲಬುರಗಿಯಲ್ಲಿ ಇಬ್ಬರು ಬಿಜೆಪಿ ಮುಖಂಡರ ಕೊಲೆಯಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ರಾಜ್ಯದಲ್ಲಿ ದುಷ್ಟಶಕ್ತಿಗಳು ???ಕ್ಟಿವ್ ಮೋಡ್ ಗೆ ಬಂದಿವೆ. ಇದು ಸಮಾಜದ ವ್ಯವಸ್ಥೆಗೆ ಧಕ್ಕೆ ತಂದು, ಸಮಾಜದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿನ ಇತ್ತೀಚಿನ ಬೆಳವಣಿಗೆಗಳು ಗಮನಿಸಿದರೆ ಕಾಂಗ್ರೆಸ್ ಆಡಳಿತದಲ್ಲಿ ನಾವು ಯಾರೂ ಸುರಕ್ಷಿತ ಇಲ್ಲ ಎಂಬ ಆತಂಕದ ಭಾವನೆ ಜನಸಾಮಾನ್ಯರಲ್ಲಿ ಮೂಡುತ್ತಿದೆ.
ರಾಮೇಶ್ವರಂ ಬಾಂಬ್ ಸ್ಫೋಟ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಿನ್ನ ಹೇಳಿಕೆ ಕೊಡುತ್ತಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಮತ್ತೊಂದು ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಇಂತಹ ಹೇಳಿಕೆ ನೀಡಿದರೆ ಸಮಾಜಘಾತುಕ ಶಕ್ತಿಗಳು, ಉಗ್ರವಾದಿಗಳು, ದೇಶ ವಿರೋಧಿಗಳು ಮೈಕೊಡವಿ ನಿಲ್ಲುತ್ತಾರೆ. ಬೇಜವಾಬ್ದಾರಿ ಹೇಳಿಕೆ ಕೊಟ್ಟ ಸಚಿವರು ನಾಡಿನ ಜನತೆಗೆ ಕ್ಷಮೆಯಾಚಿಸಬೇಕು.

ಕಾಂಗ್ರೆಸ್ ತುಷ್ಠೀಕರಣ ರಾಜಕೀಯ ಮಾಡುತ್ತ ಶಾಂತ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿದೆ. ಜಾತಿ ಜಗಳ ಹಚ್ಚುತ್ತಿದೆ. ಅವೈಜ್ಞಾನಿಕವಾದ ಜಾತಿ ಗಣತಿ ವರದಿ ಸ್ವೀಕರಿಸಿ ಚುನಾವಣೆ ಹೊತ್ತಿನಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಷಡ್ಯಂತ್ರ ಮಾಡುತ್ತಿದೆ. ಆದರೆ ರಾಜ್ಯದ ಜನತೆ ಬುದ್ದಿವಂತರಿದ್ದಾರೆ. ಕಾಂಗ್ರೆಸ್ ನಾಟಕ ಇನ್ಮೇಲೆ ನಡೆಯುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.