ಕಾಂಗ್ರೆಸ್ ನಾಯಕರಿಗೆ ಹೆಚ್. ದುಗ್ಗಪ್ಪ ಸನ್ಮಾನ

ದಾವಣಗೆರೆ.ನ.೨೩: ಈಚೆಗೆ ಬೆಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಪರಿಶಿಷ್ಟ ಜಾತಿ, ಪಂಗಡದ ರಾಜ್ಯಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರ ಆಕಾಂಕ್ಷಿ, ಕೆಪಿಸಿಸಿ ಸದಸ್ಯ ಹೆಚ್. ದುಗ್ಗಪ್ಪ ಅವರು ಪಾಲ್ಗೊಂಡು ಕಾಂಗ್ರೆಸ್ ನಾಯಕರುಗಳನ್ನು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ರಾಜ್ಯದ ಉಸ್ತುವಾರಿ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಮತ್ತಿತರರಿದ್ದರು.