
ಬೆಂಗಳೂರು, ಏ.18- ಮುಂಬರುವ ವಿಧಾನಸಭಾ ಚುನಾನಣೆಗೆ ಪ್ರತಿ ಪಕ್ಷ ಕಾಂಗ್ರೆಸ್ ಇಂದು ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ. ಏಳು ಕ್ಷೇತ್ರಗಳಿಗೆ ಮಾತ್ರ
ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ.
ಈ ಮೂಲಕ ಒಟ್ಟು 216 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪೂರ್ಣಗೊಳಿಸಿದಂತಾಗಿದೆ. ನಾಮಪತ್ರ ಸಲ್ಲಿಕೆಗೆ ಎರಡು ದಿನ ಮಾತ್ರ ಬಾಕಿ ಉಳಿದಿದೆ. ಕಾಂಗ್ರೆಸ್ ಇನ್ನೂ 8 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.
ಬಿಜೆಪಿಗೆ ರಾಜೀನಾಮೆ ನೀಡಿ ನಿನ್ನೆಯಷ್ಟೇ ಕಾಂಗ್ರೆಸ್ ಗೆ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ನಿಂದ ಟಿಕೆಟ್ ನೀಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸುತ್ತಿರುವ ಶಿಗ್ಗಾಂವಿ ಕ್ಷೇತ್ರಕ್ಕೆ ಮಹಮ್ಮದ್ ಯೂಸೂಫ್ ಸವಣೂರು ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ.
ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ ಹೆಚ್ .ಡಿ .ತಮ್ಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.ಇದರಿಂದಾಗಿ ಚಿಕ್ಕಮಗಳೂರಿನಲ್ಲಿ ಬಂಡಾಯದ ಬಿಸಿ ಕಾಂಗ್ರೆಸ್ಗೆ ತಟ್ಟುವ ಸಾಧ್ಯತೆ ಇದೆ.
4ನೇ ಪಟ್ಟಿಯಲ್ಲಿ ಲಿಂಗಾಯತ ಸಮುದಾಯದ 2, ಒಕ್ಕಲಿಗ, ಭೋವಿ, ಕುರುಬ ಹಾಗೂ ಮುಸ್ಲಿಂ ಸಮುದಾಯದ ತಲಾ ಒಬ್ಬರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ಕಾಂಗ್ರೆಸ್ 4 ನೇ ಪಟ್ಡಿ ಬಿಡುಗಡೆ
ಕ್ಷೇತ್ರ – ಅಭ್ಯರ್ಥಿ
ಲಿಂಗಸುಗೂರು ಕ್ಷೇತ್ರ – ದುರ್ಗಪ್ಪ ಎಸ್.ಹೂಲಗೇರಿ
ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರ -ಜಗದೀಶ್ ಶೆಟ್ಟರ್
ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರ – ದೀಪಕ್ ಚಿಂಚೋರೆ
ಶಿಗ್ಗಾಂವಿ ಕ್ಷೇತ್ರ – ಮೊಹಮ್ಮದ್ ಯೂಸುಫ್ ಸವಣೂರು
ಹರಿಹರ ಕ್ಷೇತ್ರ – ನಂದಗಾವಿ ಶ್ರೀನಿವಾಸ
ಚಿಕ್ಕಮಗಳೂರು ಕ್ಷೇತ್ರ – ಹೆಚ್.ಡಿ.ತಮ್ಮಯ್ಯ
ಶ್ರವಣಬೆಳಗೊಳ ಕ್ಷೇತ್ರ – ಎಂ.ಎ.ಗೋಪಾಲಸ್ವಾಮಿ