ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪರಿಸರ ಸಂರಕ್ಷಣೆ ಸ್ನೇಹಿ ದಿನಾಚರಣೆ

ಲಿಂಗಸುಗೂರು.ಜೂ.೦೫-ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಇಂದು ವಿಶ್ವ ಪರಿಸರ ಸಂರಕ್ಷಣೆ ಸ್ನೇಹಿ ದಿನಾಚರಣೆ ಸರಳವಾಗಿ ಆಚರಿಸಲಾಯಿತು ಪ್ರತಿಯೊಬ್ಬ ವ್ಯಕ್ತಿಯೂ ಗಿಡ ಮರ ಬಳ್ಳಿಗಳ ಮರವನ್ನು ಬೆಳೆಸುವ ಮೂಲಕ ಸಾರ್ವಜನಿಕರು ಮುಂದಾಗಬೇಕು ಮತ್ತು ಪರಿಸರ ಸ್ವಚ್ಛತೆ ಬಗೆಗೆ ಆದ್ಯತೆ ನೀಡಬೇಕು ಎಂಬುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಪಾಮಯ್ಯ ಮುರಾರಿ ಹೇಳಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಜವಾಬ್ದಾರಿ ಕೂಡ ಆಗಿದೆ ಪರಿಸರದಿಂದ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕೈ ಜೋಡಿಸಿ ಮುಂದಾಗೋಣ ಇಂದು ವಿಶ್ವ ಪರಿಸರ ದಿನಾಚರಣೆ ಕಾಡು ಬೆಳೆಸಿ ನಾಡು ಉಳಿಸಿ ಎಂದು ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಗುಂಡಪ್ಪ ನಾಯಕ ಹೇಳಿದರು.
ಈ ಸಂದರ್ಭದಲ್ಲಿ ಪರುಶುರಾಮ ನಗನೂರ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಗುಂಡಪ್ಪ ಮೇದನಾಪುರ, ಚೆನ್ನಬಸವ ಸೇರಿದಂತೆ ಇತರರು ಇದ್ದರು.