ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಕ್ಕೆ ಮೆಚ್ಚಿ ಸೇರ್ಪಡೆ

(ಸಂಜೆವಾಣಿ ವಾರ್ತೆ)
ಹುಮನಾಬಾದ್ :ಮಾ.27: ಹುಮನಾಬಾದ್ ಪಟ್ಟಣದ ಖಾಸಗಿ ಸಭಾಮಂಟಪದಲ್ಲಿ ಭಾನುವಾರ ಶಾಸಕ ರಾಜಶೇಖರ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಸೇರ್ಪಡೆಯಾದರು.
ಬಳಿಕ ಶಾಸಕ ರಾಜಶೇಖರ ಪಾಟೀಲ್ ಮಾತನಾಡಿ, ಮಾಜಿ ಸಿಎಂ. ಸಿದ್ದರಾಮಯ್ಯ ನವರ ಆಡಳಿತ ಅವಧಿಯಲ್ಲಿ ನೀಡಿರುವಂತ ಜನಪರ ಯೋಜನೆಗಳನ್ನು ಮೆಚ್ಚಿ ಜೆಡಿಎಸ್ ಮುಖಂಡ ಸತೀಷ ರಾಂಪೂರೆ ಹಾಗೂ ಬಿಜೆಪಿ ಮುಖಂಡ ಮಲ್ಲಿಕಾರ್ಜುನ್ ಪ್ರಭಾ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷ್ಕೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಸಿದ್ದಾಂತಕ್ಕೆ ಮೆಚ್ಚಿ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಹಿನ್ನಲೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹಳ ಬಲಿಷ್ಠವಾಗಿದೆ. ಮಾಜಿ ಪ್ರಧಾನಮಂತ್ರಿ ಮನಮೋಹನ ಸಿಂಗ್ ಹಾಗೂ ರಾಜ್ಯದಲ್ಲಿ ಮಾಜಿ ಸಿಎಂ. ಸಿದ್ದರಾವಯ್ಯ ನೀಡಿರುವ ಉತ್ತಮ ಆಡಳಿತದ ಹಿನ್ನಲೆ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ್, ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ್, ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಫ್ಸರಮಿಯ, ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ ಜಮಗಿ, ಜಿಪಂ. ಮಾಜಿ ಉಪಾಧ್ಯಕ್ಷ ಲಕ್ಷ್ಮಣರಾವ ಬುಳ್ಳಾ, ತಾಪಂ. ಮಾಜಿ ಅಧ್ಯಕ್ಷ ರಮೇಶ ಡಾಕುಳಗಿ, ಪ್ರಮುಖರಾದ , ದತ್ ಕುಮಾರ್ ಚಿದ್ರಿ , ಕಂಟೆಪ್ಪ ದಾನ ,ಆನಂದ, ಉಮೇಶ್ , ಅರುಣ, ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು .